ಮಡಿಕೇರಿ, ಜು. ೨೮ : ನಗರದ ಹೊರವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್.ಟಿ.ಓ.) ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ದಿಢೀರ್ ಭೇಟಿ ನೀಡಿದರು.

ಕಚೇರಿಯ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜನರ ಕೆಲಸ ವಿಳಂಬ ಮಾಡಬಾರದು. ಸಕಾಲದಲ್ಲಿ ಪೂರ್ಣಗೊಳಿಸಿ ಜನರ ಹಿತ ಕಾಪಾಡುವುದು ಸಿಬ್ಬಂದಿಗಳ ಕರ್ತವ್ಯವಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.