ಸಿದ್ದಾಪುರ, ಜು. ೨೮: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಕಸದ ರಾಶಿ ತುಂಬಿ ದುರ್ವಾಸನೆ ಬೀರುತ್ತಿದ್ದು ಶಾಶ್ವತ ಪರಿಹಾರಕ್ಕೆ ನಾಗರಿಕ ಸಮಿತಿ ಒತ್ತಾಯಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದೆ.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಚಾಲಕ ಹೆಚ್.ಬಿ. ರಮೇಶ್ ಅತೀ ಹೆಚ್ಚು ಆದಾಯ ಗಳಿಕೆಯ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು ಕಸವಿಲೇವಾರಿಗೆ ಶಾಶ್ವತ ಪರಿಹಾರವಾಗಿ ಜಾಗ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಈ ಸಂಬAಧ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಹೆಚ್. ಮೂಸ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಪೌರಕಾರ್ಮಿಕರ ಕೊರತೆ ಇದೆ ಶುಚ್ಚಿತ್ವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಚಂರಡಿಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ನಾತ ಬೀರುತ್ತಿದೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಆಡಳಿತ ಮಂಡಳಿ ಶುಚಿತ್ವ ವಿಷಯದಲ್ಲಿ ತ್ವರಿತವಾಗಿ ಸ್ಪಂದಿಸದಿದ್ದರೆ ಗ್ರಾಮಸ್ಥರ ಸಹಕಾರದೊಂದಿಗೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಅನಿಲ್, ನವೀದ್ ಖಾನ್, ಬೈಜು, ಅಬ್ದುಲ್ ರಹಿಮಾನ್, ಹಂಸ, ಸಿದ್ದೀಕ್ ಹಾಜರಿದ್ದರು.