ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು

ನವದೆಹಲಿ, ಜು. ೨೮: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬAಧಿ ಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿAದ ಉಭಯ ಸದನಗಳನ್ನು ಸೋಮ ವಾರಕ್ಕೆ ಮುಂದೂಡಲಾಯಿತು. ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ ಅವಿಶ್ವಾಸ ನಿರ್ಣಯದ ಮೇಲೆ ತಕ್ಷಣ ಚರ್ಚೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದರು. ಮಣಿಪುರದ ಪರಿಸ್ಥಿತಿಯ ಬಗ್ಗೆ ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಾಗಿ ವಿರೋಧ ಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಎಂಟು ದಿನಗಳಿಂದಲೂ ಸುಗಮ ಕಲಾಪ ನಡೆಯದೇ ವ್ಯರ್ಥವಾಗುತ್ತಿದೆ.

ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಉಡುಪಿ, ಜು. ೨೮: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿ ನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶೌಚಾಲಯದಲ್ಲಿ ಹಿಂದೂ ಯುವತಿಯ ವೀಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ಇAಫಾಲ್, ಜು. ೨೮: ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಶಂಕಿತ ಶಸ್ತçಸಜ್ಜಿತ ದುಷ್ಕರ್ಮಿಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ. ಶಸ್ತçಸಜ್ಜಿತ ದುಷ್ಕರ್ಮಿಗಳು-ಭದ್ರತಾ ಪಡೆಗಳ ನಡುವೆ ನಿನ್ನೆ ಬೆಳಿಗ್ಗೆಯಿಂದ ಆರಂಭವಾಗ ಗುಂಡಿನ ದಾಳಿ, ತಡರಾತ್ರಿವರೆಗೂ ಮುಂದುವರೆದಿತ್ತು. ಈ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆAದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಇಂಫಾಲ್ ನಿಂದ ೫೦ ಕಿಮೀ ದೂರದಲ್ಲಿರುವ ಫೌಬಕ್‌ಚಾವೊ ಇಖೈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ತಡರಾತ್ರಿಯವರೆಗೆ ಸುಮಾರು ೧೫ ಗಂಟೆಗಳ ಕಾಲ ಮುಂದುವರೆದಿತ್ತು. ಈ ವೇಳೆ ತೇರಾ ಖೊಂಗ್ಸಾAಗ್ಬಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿರುವುದು ವರದಿಯಾಗಿದೆ.

‘ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ’

ಬೆಂಗಳೂರು, ಜು. ೨೮: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ, ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್‌ಗೆ ೫ ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ೩ ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು.

ನಿವೃತ್ತ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲು

ನವದೆಹಲಿ, ಜು. ೨೮: ಹಿರಿಯ ಮಹಿಳಾ ಟಿವಿ ಪತ್ರಕರ್ತೆಯ ವಿರುದ್ಧ ಸಾಮಾಜಿಕ ಮಾಧ್ಯಮದ ಮೂಲಕ ಅವಹೇಳನಕಾರಿ ಟೀಕೆ ಮಾಡಿ ಪೋಸ್ಟ್ ಮಾಡಿದ ಆರೋಪದಡಿ ನಿವೃತ್ತ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಜಿ ಉಪ ನ್ಯಾಯಾಧೀಶ ಎಸ್ ಸುದೀಪ್ ಅವರು ಇತ್ತೀಚಿನ ಫೇಸ್‌ಬುಕ್ ಪೋಸ್ಟ್ನಲ್ಲಿ ಮಹಿಳಾ ಟಿವಿ ನಿರೂಪಕರೊಬ್ಬರ ವಿರುದ್ಧ ವಿಡಂಬನಾತ್ಮಕ ಸುದ್ದಿ ವಿಶ್ಲೇಷಣೆ ಕಾರ್ಯಕ್ರಮವನ್ನು ಟೀಕಿಸಿದ್ದು ಮಾತ್ರವಲ್ಲದೇ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು. ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಮಾಜಿ ಜಡ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಣಿಪುರದಿಂದ ಹೊರಗೆ ವಿಚಾರಣೆ ಕೋರಿ ಸುಪ್ರೀಂಗೆ ಮನವಿ

ನವದೆಹಲಿ, ಜು. ೨೮: ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ಮಾಡಿ, ಕಿರುಕುಳ ನೀಡಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಿರುವ ಕೇಂದ್ರ ಸರ್ಕಾರ, ಪ್ರಕರಣದ ವಿಚಾರಣೆಯನ್ನು ಮಣಿಪುರದಿಂದ ಹೊರಗೆ ನಡೆಸಲು ಆದೇಶಿಸುವಂತೆ ಸುಪ್ರೀಂ ಕೋರ್ಟ್ ಬಳಿ ಮನವಿ ಮಾಡಿ ಕೊಂಡಿದೆ. ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅಫಿಡವಿಟ್ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಣಿಪುರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಹಿಂಸಾಚಾರ ಪ್ರಕರಣಗಳ ವಿಚಾರಣೆಯನ್ನು ೬ ತಿಂಗಳೊಳಗೆ ಪೂರ್ಣಗೊಳಿಸುವಂತೆ ಆದೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.