ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿದ ಪ್ರಕರಣ : ತನಿಖೆ ಕೈಗೆತ್ತಿಕೊಂಡ ಸಿಬಿಐ

ನವದೆಹಲಿ, ಜು. ೨೯: ಮೇ ೪ ರಂದು ಮಣಿಪುರದಲ್ಲಿ ಗುಂಪೊAದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬAಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿನ ಎರಡು ಸಮುದಾಯದ ಪೈಕಿ ಒಂದು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿರುವುದನ್ನು ತೋರಿಸುವ ವೀಡಿಯೋ ತಾ. ೧೯ ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿತ್ತು. ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ ೨ ರಂದು ಕಾಂಗ್ರೆಸ್ ಹೈಕಮಾಂಡ್ ಸಭೆ

ಬೆಂಗಳೂರು, ಜು. ೨೯: ಕೆಲ ದಿನಗಳಿಂದ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ ೨ ರಂದು ನವದೆಹಲಿಯಲ್ಲಿ ಕರ್ನಾಟಕದ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಮತ್ತು ಕರ್ನಾಟಕದ ಪ್ರಮುಖ ಕಾಂಗ್ರೆಸ್ ನಾಯಕರ ನಡುವೆ ಮೊದಲ ಸಭೆ ನಡೆಯಲಿದೆ. ಎರಡನೇ ಸಭೆಯು ಕಾಂಗ್ರೆಸ್ ಸಚಿವರೊಂದಿಗೆ ನಡೆಯಲಿದೆ.

ಇಬ್ಬರು ಆರೋಪಿಗಳ ಮನೆ ಧ್ವಂಸ ಮಾಡಿದ ಮಧ್ಯಪ್ರದೇಶ ಸರ್ಕಾರ

ಸತ್ನಾ, ಜು. ೨೯: ೧೨ ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ದೇವಸ್ಥಾನ ಪಟ್ಟಣವಾದ ಮೈಹಾರ್‌ನಲ್ಲಿ ೧೨ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕ್ರೂರವಾಗಿ ವರ್ತಿಸಿದ ಆರೋಪ ಹೊತ್ತಿರುವ ಇಬ್ಬರ ಮನೆಗಳನ್ನು ಸ್ಥಳೀಯ ಆಡಳಿತ ಶನಿವಾರ ನೆಲಸಮಗೊಳಿಸಿದೆ. ಆರೋಪಿಗಳಾದ ರವೀಂದ್ರ ಕುಮಾರ್ ಮತ್ತು ಅತುಲ್ ಭಡೋಲಿಯಾ ಗುರುವಾರ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿಯ ಮೈತುಂಬಾ ಕಚ್ಚಿ ಗಾಯಗೊಳಿಸಿದ್ದರು. ಆರೋಪಿಗಳಿಬ್ಬರ ಮನೆಗಳ ನಿರ್ಮಾಣದಲ್ಲಿ ಅಕ್ರಮವೆಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಇಂದು ಬೆಳಿಗ್ಗೆ ಎರಡೂ ಮನೆಗಳನ್ನು ಕೆಡವಲಾಯಿತು ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಲೋಕೇಶ್ ದಬರ್ ತಿಳಿಸಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ೯ ಮಂದಿ ದುರ್ಮರಣ

ಚೆನ್ನೆöÊ, ಜು. ೨೯: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ೯ ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. ಕೃಷ್ಣಗಿರಿಯ ಮುರುಗನ್ ದೇವಸ್ಥಾನದ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ಹತ್ತಿರದಲ್ಲಿದ್ದ ಮೂರು ಮನೆಗಳಿಗೂ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಘಟನೆಯಲ್ಲಿ ೯ ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಮೃತರನ್ನು ಕಾರ್ಖಾನೆ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ. ಕಾರ್ಖಾನೆ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಮ್ರಾನ್, ವಾಟರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಎಂಬವವರೂ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು

ರಾಂಚಿ, ಜು. ೨೯: ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟು, ೧೦ ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೆರವಣಿಗೆ ವೇಳೆ ಕಬ್ಬಿಣದಿಂದ ಮಾಡಿದ ಧಾರ್ಮಿಕ ಧ್ವಜವು ೧೧ ಸಾವಿರ ವೋಲ್ಟ್ನ ವಿದ್ಯುತ್ ತಂತಿಗೆ ತಾಗಿದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಬೊಕಾರೊಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಹೇಳಿದ್ದಾರೆ. ೧೦ ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.