ಸೋಮವಾರಪೇಟೆ, ಜು. ೨೯: ಈಗಾಗಲೇ ಸೋಮವಾರಪೇಟೆ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವೆಂದು ಘೋಷಿಸಲಾಗಿದ್ದು, ಇದನ್ನು ಶೇ. ೧೦೦ ರಷ್ಟು ಅನುಷ್ಠಾನಕ್ಕೆ ತರಲು ಸಾರ್ವಜನಿಕರು ಸಹಕರಿಸಬೇಕೆಂದು ಮುಖ್ಯಾಧಿಕಾರಿ ನಾಚಪ್ಪ ಹೇಳಿದರು. ಪೌರಾಡಳಿತ ನಿರ್ದೇಶನಾಲಯದ ಸೂಚನೆಯಂತೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಯೋಜಿಸಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಅಂಗಡಿ ಮುಂಗಟ್ಟುಗಳಿAದ ವಸ್ತುಗಳನ್ನು ಖರೀದಿಸುವ ಸಂದರ್ಭ ಮನೆಯಿಂದಲೇ ಬಟ್ಟೆ ಚೀಲವನ್ನು ಕೊಂಡೊಯ್ಯಬೇಕು. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡುಬAದರೆ ಪಂಚಾಯಿತಿಗೆ ಮಾಹಿತಿ ನೀಡಬೇಕು. ಅಂತಹ ಅಂಗಡಿಗಳಿಗೆ ದಾಳಿ ನಡೆಸಿ ದಂಡ ವಿಧಿಸಲಾಗುವುದು. ಇದರೊಂದಿಗೆ ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ವಿಂಗಡಿಸಿ, ಪಂಚಾಯಿತಿಯ ವಾಹನಕ್ಕೆ ನೀಡಬೇಕು. ಎಲ್ಲೆಂದರಲ್ಲಿ ಕಸವನ್ನು ಎಸೆಯಬಾರದು ಎಂದರು.
ಆರೋಗ್ಯಾಧಿಕಾರಿ ಜಾಸಿಂ ಖಾನ್ ಮಾತನಾಡಿ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಪ್ರತಿಜ್ಞೆಯನ್ನು ಎಲ್ಲರೂ ಮಾಡಬೇಕು. ಪ್ಲಾಸ್ಟಿಕ್ ತ್ಯಜಿಸಿದರೆ ಮಾತ್ರ ಪರಿಸರ ಉಳಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಸದಸ್ಯರುಗಳಾದ ಶೀಲಾ ಡಿಸೋಜ, ಬಿ.ಆರ್. ಮೃತ್ಯುಂಜಯ, ಮಹೇಶ್, ಪಂಚಾಯಿತಿ ಅಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.