ಸೋಮವಾರಪೇಟೆ, ಜು. ೨೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಸೋಮವಾರಪೇಟೆ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ಕರ್ಕಳ್ಳಿ ರುದ್ರಭೂಮಿಯಲ್ಲಿ ನಡೆಸಲಾಯಿತು.

ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ಅವರು ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಭಿಮನ್ಯು ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಓ. ಗಾನಶ್ರೀ , ಗ್ರಾ.ಪಂ. ಸದಸ್ಯರುಗಳಾದ ಪಾರ್ವತಿ, ಯೋಗೇಂದ್ರ, ಪ.ಪಂ. ಆರೋಗ್ಯಾಧಿಕಾರಿ ಜಾಸಿಂ ಖಾನ್, ಯೋಜನೆಯ ವಲಯ ಮೇಲ್ವಿಚಾರಕಿ ಜಯಶ್ರೀ, ಕೃಷಿ ಮೇಲ್ವಿಚಾರಕ ರಾಜಣ್ಣ, ಸೋಮವಾರಪೇಟೆಯ ಸೇವಾ ಪ್ರತಿನಿಧಿಗಳಾದ ಲೀಲಾ, ತಾರಾ ಲಕ್ಷ್ಮಿ, ರೇಷ್ಮಾ, ಶೌರ್ಯ ವಿಪತ್ತು ತಂಡ ಗಾಂಧಿನಗರ ಘಟಕ, ಗಾಂಧಿನಗರ ಮತ್ತು ಕರ್ಕಳ್ಳಿ ಒಕ್ಕೂಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.