*ಗೋಣಿಕೊಪ್ಪ, ಜು. ೩೦: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳಾ ಜ್ಞಾನವಿಕಾಸ ಕೇಂದ್ರ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ತಾಲೂಕು ವೈದ್ಯಾ ಧಿಕಾರಿ ಡಾ. ಯತಿರಾಜ್ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು. ಆರೋಗ್ಯ ವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮತ್ತು ನಿಯಮಿತವಾದ ವ್ಯಾಯಾಮ ಮಾq Àಬೇಕು ಎಂದು ಸಲಹೆ ನೀಡಿದರು.
ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಬಾಲು, ಸದಸ್ಯೆ ಮಂಜುಳಾ, ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ತಾಲೂಕಿನ ಯೋಜನಾಧಿಕಾರಿ ದಿನೇಶ್, ವಲಯದ ಮೇಲ್ವಿಚಾರಕ ಧನೇಶ್, ತಾಲೂಕು ಜ್ಞಾನವಿಕಾಸ ಸಮನ್ವ ಯಾಧಿಕಾರಿ ಶ್ರೇಯ ಆರ್., ಹರಿಶ್ಚಂದ
್ರಪುರ ಸೇವಾ ಪ್ರತಿನಿಧಿ ಸರಿತಾ, ಆಸ್ಪತ್ರೆ ಸಿಬ್ಬಂದಿ ಶಶಿಕಾಂತ್, ಗೋಣಿಕೊಪ್ಪ ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿ ಗಳು ಉಪಸ್ಥಿತರಿದ್ದರು.