ಮಡಿಕೇರಿ, ಜು. ೨೯: ಕೊಂಡAಗೇರಿ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಎ.ಎಂ. ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಡಿ.ಎಸ್. ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವರು ಸೇರ್ಪಡೆಗೊಂಡಿದ್ದಾರೆ. ರಾಜ್ಯ ಜೆಡಿಎಸ್ ಪಕ್ಷದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಪಾಧ್ಯಕ್ಷ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎ. ಯೂಸುಫ್ ಹಾಜಿ, ಪಿ.ಇ. ಶಾದುಲಿ, ಎಂ.ಇ. ಸಾದುಲಿ, ಕೆ.ಎ. ಜಕರಿಯಾ, ಪಿ.ಹೆಚ್. ಅಬ್ಬಾಸ್, ಪಿ.ಹೆಚ್. ಅಹಮದ್, ಪಿ.ಎಂ. ಆಲಿ, ಬೈರ ಬೇಬಿ, ಗ್ರಾಮ ಪಂಚಾಯಿತಿ ಸದಸ್ಯ ಕೆ.ಇ. ಉಸ್ಮಾನ್ ಮತ್ತಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಯೂಸುಫ್ ಹಾಜಿ ಅವರು ತಿಳಿಸಿದ್ದಾರೆ.