ನಾಪೋಕ್ಲು, ಜು. ೨೯: ನಾಪೋಕ್ಲು ಕೊಡವ ಸಮಾಜ ಸಾಂಸ್ಕೃತಿಕ ಮತ್ತು ಮನೋರಂಜನಾ ಕೂಟದ ವತಿಯಿಂದ ವಾರ್ಷಿಕ ಒತ್ತೋರ್ಮೆ ಕೂಟವು ತಾ. ೩೦ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡವ ಸಮಾಜದ ಸಾಂಸ್ಕೃತಿಕ ಮತ್ತು ಮನೋರಂಜನಾ ಕೂಟದ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆ.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಕರ್ನಾಟಕ ಸರಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.