ವೀರಾಜಪೇಟೆ, ಜು. ೩೦: ಬಿಟ್ಟಂಗಾಲ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಿಟ್ಟಂಗಾಲ ವಲಯ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ವೀರಾಜಪೇಟೆ ಬ್ಲಾಕ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.