ಸಿಂಗಾಪುರದ ೭ ಉಪಗ್ರಹಗಳ ಯಶಸ್ವಿಯಾಗಿ ಉಡಾವಣೆ
ಶ್ರೀಹರಿಕೋಟಾ, ಜು. ೩೦: ೭ ವಿದೇಶಿ ಉಪಗ್ರಹಗಳನ್ನು ಹೊತ್ತು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಪಿಎಸ್‌ಎಲ್‌ವಿ-ಸಿ೫೬ ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಚಂದ್ರಯಾನ-೩ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಮತ್ತೊಂದು ರಾಕೆಟ್ ಉಡಾವಣೆ ಮಾಡಿದ್ದು, ಸಿಂಗಾಪೂರದ ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ೫೬ ರಾಕೆಟ್ ಅನ್ನು ಇಂದು ಬೆಳಿಗ್ಗೆ ೬.೩೦ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ(ಎಸ್‌ಡಿಎಸ್‌ಸಿ)ದಿAದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಕಚ್ಚಾ ಬಾಂಬ್ ಸ್ಫೋಟದಲ್ಲಿ ಬಾಲಕನಿಗೆ ಗಾಯ
ಕೋಲ್ಕತ್ತಾ, ಜು. ೩೦: ಪಶ್ಚಿಮ ಬಂಗಾಳದ ಉತ್ತರ ೨೪ ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಬಸಿರ್‌ಹತ್ ಬ್ಲಾಕ್ ೨ರಲ್ಲಿ ೪ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಗಾಯಗೊಂಡಿದ್ದು, ಆತ ತನ್ನ ಮನೆಯ ಸಮೀಪದ ಮೈದಾನದಲ್ಲಿ ಬಿದ್ದಿದ್ದ ಕಚ್ಚಾ ಬಾಂಬ್ ಅನ್ನು ಚೆಂಡು ಎಂದು ತಪ್ಪಾಗಿ ಗ್ರಹಿಸಿ ಸ್ಪರ್ಶಿಸಿದ್ದಾನೆ. ಈ ವೇಳೆ ಬಾಂಬ್ ಸ್ಫೋಟಗೊಂಡು ಆತನಿಗೆ ಗಾಯವಾಗಿದೆ. ಬಾಲಕನನ್ನು ಬಸಿರ್‌ಹತ್‌ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆತನ ಪರಿಸ್ಥಿತಿ ಗಂಭೀರವಾಗಿದ್ದರಿAದ ಆತನನ್ನು ಕೋಲ್ಕತ್ತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದ ತಂಡವು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಬಾಲಕನ ಬಲಗೈಗೆ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟೊಮೆಟೊ ತುಂಬಿದ್ದ ಲಾರಿ ನಾಪತ್ತೆ!
ಕೋಲಾರ, ಜು. ೩೦: ಸುಮಾರು ೨೧ ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ತಾ. ೨೭ ರಂದು ಕೋಲಾರದಿಂದ ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಹೊರಟ್ಟಿದ್ದ ಲಾರಿ ನಾಪತ್ತೆಯಾಗಿದೆ. ಲಾರಿ ಚಾಲಕ ಮೊಬೈಲ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಮಂಡಿ ವ್ಯಾಪಾರಿಗಳು ಕೋಲಾರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮೆಹತ್ ಟ್ರಾನ್ಸ್ಪೋರ್ಟ್ಗೆ ಸೇರಿದ ಮುನಿರೆಡ್ಡಿ ಎಂಬವರಿಗೆ ಸೇರಿದ ಲಾರಿ ನಾಪತ್ತೆಯಾಗಿದೆ. ಇದರಿಂದ ಆತಂಕಗೊAಡಿರುವ ವ್ಯಾಪಾರಿಗಳು ದೂರು ನೀಡಿದ್ದಾರೆ.
ಇಬ್ಬರು ಉದ್ಯಮಿಗಳ ರೂ. ೪೦ ಕೋಟಿ ಸ್ಥಿರಾಸ್ತಿ ಜಪ್ತಿ
ಹುಬ್ಬಳ್ಳಿ, ಜು. ೩೦: ರೂ. ೫೨೫ ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ೪೦.೨೨ ಕೋಟಿ ಮೌಲ್ಯದ ೧೨ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ. ಆರೋಪಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಉದ್ಯಮಿಗೆ ರೂ. ೫೨೫ ಕೋಟಿ ಹಣಕಾಸು ವ್ಯವಹಾರ ನಡೆಸಿದ್ದರು. ಮಹಾರಾಷ್ಟç ಮತ್ತು ಮಧ್ಯಪ್ರದೇಶದಲ್ಲಿರುವ ಒಟ್ಟು ೧೨ ಲಗತ್ತಿಸಲಾದ ಆಸ್ತಿಗಳಲ್ಲಿ ಭೂಮಿ, ವಾಣಿಜ್ಯ ಆವರಣಗಳು, ವಿಂಡ್ ಮಿಲ್‌ಗಳು, ವಸತಿ ಅಪಾರ್ಟ್ಮೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಡಿ ತನಿಖೆ ಆರಂಭಿಸಿದೆ. ತನಿಖೆಯ ವೇಳೆ, ಮಾನೆರೆ ಇತರ ಆರೋಪಿಗಳೊಂದಿಗೆ ಸಂಚು ರೂಪಿಸಿ, ದೂರುದಾರ ಸಂಜಯ್ ದನ್‌ಚಂದ್ ಘೋಡಾವತ್ ಅವರೊಂದಿಗೆ ಸ್ನೇಹ ಬೆಳೆಸಿದರು. ಅಲ್ಲದೆ ೫೨೫ ಕೋಟಿ ರೂಪಾಯಿಗಳನ್ನು ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸಿದರು. ಆರೋಪಿಗಳು ಹಣವನ್ನು ಬೇರೆಡೆಗೆ ತಿರುಗಿಸಿ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಮತ್ತು ಇತರ ಕೆಲವು ವ್ಯಕ್ತಿಗಳ ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಫಾಲ್ಸ್ನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆ
ಉಡುಪಿ, ಜು. ೩೦: ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (೨೩) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದ ಬಳಿ ಸ್ನೇಹಿತನೊಂದಿಗೆ ರೀಲ್ಸ್ ಮಾಡಲು ಹೋಗಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಯುವಕ ಶರತ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಆದರೆ ಧಾರಾಕಾರ ಮಳೆ, ಧುಮ್ಮುಕ್ಕಿ ಹರಿಯುವ ಜಲಪಾತದ ಅಬ್ಬರದಿಂದ ಯುವಕ ಪತ್ತೆ ಆಗಿರಲಿಲ್ಲ. ಆದರೂ. ಮುಳುಗು ತಜ್ಞರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಳೆದ ಒಂದು ವಾರದಿಂದ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ್ದರು. ಕೊನೆಗೂ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಜಲಾಶಯದ ೨೦೦ ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲಿಕಿತ್ತು ಎನ್ನಲಾಗಿದೆ.
ಕಸ್ಟಡಿಯಲ್ಲಿ ಸಾವು - ತನಿಖೆಗೆ ಆದೇಶ
ಉಧಮ್‌ಪುರ, ಜು. ೩೦: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ೩೫ ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಈ ಸಂಬAಧ ಮೃತ ರಥಿಯಾನ್ ಗ್ರಾಮದ ನಿವಾಸಿ ದಲೀಪ್ ಸಿಂಗ್ ಅವರ ಸಂಬAಧಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದು, ನ್ಯಾಯಯುತ ತನಿಖೆಗೆ ಒತ್ತಾಯಿಸಿದರು. ಉಧಮ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ದಲೀಪ್ ಸಿಂಗ್ ಅವರನ್ನು ರೋಗಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದ್ದAತೆ ಬಂಧಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವೇಳೆ ರೋಗಿಯ ಪತಿ ಮತ್ತು ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಿಂದ ಓಡಿಹೋಗಿದ್ದು ಸಿಂಗ್ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು. ನಂತರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಆನಂತರ ಅವರನ್ನು ಮಧ್ಯರಾತ್ರಿಯಲ್ಲಿ ಮಹಿಳಾ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದರು. ಎರಡು ಗಂಟೆಗಳ ನಂತರ, ಲಾಕಪ್‌ನಲ್ಲಿ ಸಿಂಗ್ ಎದೆನೋವು ಎಂದು ಹೇಳಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಸಿಂಗ್ ಮೃತಟ್ಟಿದ್ದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿದ ಅವರ ಸಂಬAಧಿಕರು ಆಸ್ಪತ್ರೆ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಉಧಂಪುರ ಹೆಚ್ಚುವರಿ ಉಪ ಕಮಿಷನರ್ ಜೋಗಿಂದರ್ ಸಿಂಗ್ ಜಸ್ರೋಟಿಯಾ ನೇತೃತ್ವದಲ್ಲಿ ಮ್ಯಾಜಿಸ್ಟೆçÃಟ್ ವಿಚಾರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಾಸಕಾಂಗ ಸಭೆಯಲ್ಲಿ ನನ್ನ ಬಗ್ಗೆ ಚರ್ಚೆಯಾಗಿಲ್ಲ : ಬೋಸರಾಜು
ರಾಯಚೂರು, ಜು. ೩೦: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರುವ ಹಾಗೂ ಇಲಾಖೆಯ ನಿರ್ವಹಣೆಯ ಬಗ್ಗೆ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪಕ್ಷಕ್ಕೆ ನನ್ನ ಸೇವೆ ಮತ್ತು ನಿಷ್ಠೆ ಮನಗಂಡು ಸಚಿವ ಸ್ಥಾನ ನೀಡಿದ್ದಾರೆ. ಸಚಿವನಾದ ನಂತರ ವಿಧಾನ ಪರಿಷತ್‌ನಲ್ಲಿ ಸಭಾನಾಯಕನಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಭಾನಾಯಕನಾಗಿದ್ದರಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯ ಜೊತೆ ವೇದಿಕೆಯಲ್ಲಿದ್ದು, ಎಲ್ಲರ ಮಾತುಗಳನ್ನು ಆಲಿಸಿದ್ದೇನೆ. ನನ್ನ ಸಚಿವ ಸ್ಥಾನ ಮತ್ತು ಇಲಾಖೆಯ ಬಗ್ಗೆ ಯಾವುದೇ ಶಾಸಕರು ಪ್ರಶ್ನೆ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.