ಗೋಣಿಕೊಪ್ಪಲು, ಜು. ೩೦: ಮಣಿಪುರ ರಾಜ್ಯದಲ್ಲಿ ಕಳೆದ ೮೦ ದಿನಗಳಿಂದಲೂ ನಿರಂತರವಾಗಿ ನಡೆಯುತ್ತಿರುವ ಗಲಭೆ ಹಿಂಸಾಚಾರ, ಅತ್ಯಾಚಾರ ಹಾಗೂ ಕೊಲೆಗಳು ಹತ್ತಿಕ್ಕಲು ಅಲ್ಲಿಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲಿನ ಸರ್ಕಾರವನ್ನು ತಕ್ಷಣ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕವು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಕೃಷ್ಣಪ್ಪ ಬೆಳ್ಳೂರು ಹಾಗೂ ಜಿಲ್ಲಾ ಸಂಚಾಲಕ ರಜಿನಿಕಾಂತ್ ಮುಂದಾಳತ್ವದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಚೇರಿಯ ಮುಂದೆ ಜಮಾವಣೆಗೊಂಡು ಕೇಂದ್ರ ಸರ್ಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿ ದಸಂಸ ವಿಭಾಗೀಯ ಸಂಚಾಲಕ ಕೃಷ್ಣಪ್ಪ ಬೆಳ್ಳೂರು ಮಾತನಾಡಿ, ಮಣಿಪುರದಲ್ಲಿ ಆದಿವಾಸಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.
ಈ ನೀಚ ಕೃತ್ಯದಿಂದ ಭಾರತ ದೇಶ ತಲೆ ತಗ್ಗಿಸುವಂತಾಗಿದೆ. ದೇಶದ ಪ್ರಧಾನಿ ಈ ಬಗ್ಗೆ ಕಠಿಣ ನಿರ್ಧಾರಗಳನ್ನು ಕೈಗೊಂಡು ಅಲ್ಲಿಯ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ಬುಡಕಟ್ಟು ಜನರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಹೋರಾಟಗಾರರಾದ ರಮೇಶ್ ಮಾಯಮುಡಿ, ಜಿ.ಪಂ. ಮಾಜಿ ಸದಸ್ಯೆ ಪಿ.ಆರ್. ಪಂಕಜ, ದಸಂಸ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸತೀಶ್ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿದರು.
ಪೊನ್ನಂಪೇಟೆ ತಾಲೂಕು ಉಪತಹಶೀಲ್ದಾರ್ ರವಿರವರ ಮೂಲಕ ಭಾರತ ಸರ್ಕಾರದ ರಾಷ್ಟçಪತಿಗಳಿಗೆ ಈ ಸಂಬAಧ ಮನವಿ ಪತ್ರವನ್ನು ಕಳುಹಿಸಿಕೊಡಲಾಯಿತು. ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಗ್ರಾಮ ಸಮಿತಿಯ ಪದಾಧಿಕಾರಿಗಳಾದ ನಿತೇಶ್, ಕರ್ಕು, ಗಣೇಶ್, ತಮ್ಮು, ಹೆಚ್.ಇ. ಶಿವಕುಮಾರ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ದಕ್ಷಿಣ ಕೊಡಗಿನ ಹೈಸೊಡ್ಲೂರು ಗ್ರಾಮದಲ್ಲಿ ೭ ವರ್ಷದಿಂದ ಪ್ಲಾಸ್ಟಿಕ್ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ, ವಸತಿ ಮತ್ತು ಮೂಲಭೂತ ಸೌಲಭ್ಯಗಳು ಒದಗಿಸಿಕೊಡಬೇಕು. ಕೆ. ಬಾಡಗ ಗ್ರಾಮದ ಸರ್ವೆ ನಂಬರ್ ೨೯/೧ರಲ್ಲಿ ಸರಕಾರದ ಜಾಗದಲ್ಲಿ ವಾಸವಿದ್ದ ಪರಿಶಿಷ್ಟ ಪಂಗಡದವರನ್ನು ಜಿಲ್ಲಾಡಳಿತವು ಇವರನ್ನು ಒಕ್ಕಲ್ಲೆಬ್ಬಿಸಿ ಎಕರೆ ಜಾಗವನ್ನು ಸಮಗ್ರ ಗಿರಿಜನ ಅಭಿವೃದ್ದಿ ಅಧಿಕಾರಿಯವರ ಹೆಸರಿನಲ್ಲಿ ಕೊಡುತ್ತೇವೆಂದು ನೀಡಿದ ಭರವಸೆಯನ್ನು ಈಡೇರಿಸಬೇಕು ಎಂದು ಸಂದರ್ಭ ಪ್ರತಿಭಟನಾಕಾರರು ಆಗ್ರಹಿಸಿದರು.