ಮುಳ್ಳೂರು, ಜು. ೩೧ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಲೆನಾಡು ರಕ್ಷಣಾ ಸೇನೆ ಸಂಯುಕ್ತ ಆಶ್ರಯದಲ್ಲಿ ವನ ಮಹೋತ್ಸವ ಅಂಗವಾಗಿ ಶನಿವಾರಸಂತೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು. ಕಾಲೇಜಿನ ಪ್ರಾಂಶುಪಾಲ ದೇವರಾಜ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಲೆನಾಡು ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ರಕ್ಷಿತ್ ರವೀಂದ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಶನಿವಾರಸಂತೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಭುವನೇಶ್ವರಿ, ಪ್ರಮುಖರಾದ ಕಿರಣ್, ಪುನಿತ್, ವಲಯ ಮೇಲ್ವಿಚಾರಕ ನಾಗರಾಜ್, ಒಕ್ಕೂಟದ ಅಧ್ಯಕ್ಷೆ ಸರೋಜ ಶೇಖರ್, ಸೇವಾ ಪ್ರತಿನಿಧಿಗಳಾದ ಎಸ್.ಆರ್. ಶೋಭಾವತಿ, ಮಂಜುಳಾ, ಪದಾಧಿಕಾರಿ ನಳಿನಿ, ಕಾಲೇಜು ವಿಭಾಗದ ಉಪನ್ಯಾಸಕರು, ಪ್ರೌಢಶಾಲಾ ವಿಭಾಗದ ಶಿಕ್ಷಕರು ಹಾಜರಿದ್ದರು.