ವೀರಾಜಪೇಟೆ, ಜು. ೩೧: ಕೇರಳದಿಂದ ಕೆಂಪು ಇಟ್ಟಿಗೆ ಸಾಗಾಟಕ್ಕೆ ಸಂಬAಧಿಸಿದAತೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸರ್ಕಾರ ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗದಂತೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎ.ಎಸ್. ಪೊನ್ನಣ್ಣ ಭರವಸೆ ನೀಡಿದರು.

ಕೇರಳದಿಂದ ಜಿಲ್ಲೆಗೆ ಕೆಂಪು ಇಟ್ಟಿಗೆ ಸಾಗಿಸಲು ಅವಕಾಶ ಕಲ್ಪಿಸಬೇಕೆಂದು ಗ್ರಾಹಕರು, ಗುತ್ತಿಗೆದಾರರು, ಲಾರಿ ಮಾಲೀಕರು ಹಾಗೂ ಚಾಲಕರು ಮನವಿ ಮಾಡಿದರು.

ಚುನಾವಣೆಗೆ ಮುನ್ನ ಕೆಂಪು ಇಟ್ಟಿಗೆ ಕೇರಳದಿಂದ ಪಟ್ಟಣ ಸೇರಿದಂತೆ ಜಿಲ್ಲೆಯ ಇತರ ಭಾಗಗಳಿಗೆ ಸರಾಗವಾಗಿ ಸಾಗಾಟವಾಗುತಿತ್ತು. ಸರ್ಕಾರದ ಬೊಕ್ಕಸಕ್ಕೆ ವಂಚನೆ ಹಾಗೂ ಅಧಿಕ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಆರೋಪದ ಹಿನೆÀ್ನಲೆಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಇದಕ್ಕೆ ಕಡಿವಾಣ ಹಾಕಿದ್ದರು. ಪರಿಣಾಮವಾಗಿ ನಗರ ಮತ್ತು ಇತರ ಭಾಗಗಳಲ್ಲಿ ನಿರ್ಮಾಣವಾಗುತಿದ್ದ ಮನೆ ಮತ್ತು ಕಟ್ಟಡಗಳು ಅರ್ಧದಲ್ಲೆ ಸ್ಥಗಿತವಾಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು.

ಮನವಿ ಸಲ್ಲಿಸಲು ಬಂದವರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರು ಕೇರಳದಲ್ಲಿ ಕಡಿಮೆ ಬೆಲೆಗೆ ದೊರೆಯುವ ಕೆಂಪು ಇಟ್ಟಿಗೆ ಜಿಲ್ಲೆಯ ಗ್ರಾಹಕರಿಂದ ಹೆಚ್ಚಿನ ಬೆಲೆಯನ್ನು ಪಡೆಯಲಾಗುತ್ತಿದೆ. ಜೊತೆಗೆ ಸರ್ಕಾರದ ಬೊಕ್ಕಸಕ್ಕು ನಷ್ಟವಾಗುತ್ತಿದೆ. ಯಾವುದೇ ಕಾರಣಕ್ಕು ಸಾರ್ವಜನಿಕರು ಹಾಗೂ ಸರ್ಕಾರಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳ ಜತೆಗೆ ಚರ್ಚಿಸಿ ಸಾರ್ವಜನಿಕರಿಗೆ ಅನ್ಯಾಯವಾಗದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಜೊತೆಗೆ ಯಾವುದೇ ಕಾರಣಕ್ಕೂ ಕಾನೂನುಬಾಹಿರವಾಗಿ ಕೆಂಪುಕಲ್ಲು ಸಾಗಾಟಕ್ಕೆ ಅವಕಾಶ ನೀಡುವುದಿಲ್ಲ ಎಂದುನ ಸ್ಪಷ್ಟಪಡಿಸಿದರು.

ಈ ಸಂದರ್ಭ ಗುತ್ತಿಗೆದಾರರಾದ ಸುರೇಶ್, ಶ್ರೀನಿವಾಸ್, ಸುಬೇರ್, ಮತ್ತಿತರರು ಇದ್ದರು.