ಮಡಿಕೇರಿ, ಆ. ೧: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಪಿ.ಎ. ಹನೀಫ್ ಚೋಕಂಡಳ್ಳಿ ಅವರನ್ನು ನೇಮಕ ಮಾಡಿ ಕರ್ನಾಟಕ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ಆದೇಶ ಹೊರಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಿಕಟಪೂರ್ವ ಅಧ್ಯಕ್ಷ ಎಂ.ಎ ಉಸ್ಮಾನ್ ಅವರನ್ನು ಬದಲಾಯಿಸಲು ತೆರೆಮರೆಯಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಅಂತಿಮ ಮುದ್ರೆ ಬಿದ್ದಿದೆ.
ಕಳೆದ ನಾಲ್ಕು ವರ್ಷಗಳಿಂದ ಎಂ.ಎ ಉಸ್ಮಾನ್ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವ ಹಿಸುತ್ತಿದ್ದರು