ಮಡಿಕೇರಿ, ಜು. ೩೧: ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ಶೆಟ್ಟಿ ಕುಂದಾಪುರ ತಾಲೂಕು ಚಿತ್ತೂರು ಸರಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿAದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಸಂಘದ ಅಧ್ಯಕ್ಷ ಕೆ.ಜಿ. ಅಶೋಕ್, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಮೃತ್ಯುಂಜಯ, ನಿವೃತ್ತ ಶಿಕ್ಷಕರಾದ ಎ.ಜಿ. ಗಣೇಶ್, ರಮೇಶ್ ಪ್ರಸನ್ನಕುಮಾರ್, ಮತ್ತು ಗ್ರೇಡ್ ೨ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ. ಪೂರ್ಣೇಶ್, ಕಾರ್ಯದರ್ಶಿಯಾದ ಶಿವಪ್ರಸಾದ್ ಕೆದಂಬಾಡಿ ಹಾಗೂ ಪದಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಕರು ಭಾಗವಹಿಸಿದ್ದರು.