ಮಡಿಕೇರಿ, ಆ. ೧: ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ಪದ್ನೆಟ್ಟ್ ಆಚರಣೆ ತಾ.೩ ರಂದು ಅಖಿಲ ಕೊಡವ ಸಮಾಜದ ಕಟ್ಟಡದಲ್ಲಿ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ೩೦ ವರ್ಷಗಳ ಕಾಲ ಉದ್ಘೋಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗು ವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ, ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಮಣಿ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪAಡ ಸುಗುಣ ಮುತ್ತಣ್ಣ ಹಾಗೂ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಕ್ಕಡ ಪದ್ನೆಟ್ಟ್ ಅಂಗವಾಗಿ ಮಾಡುವ ವಿಶೇಷ ಖಾದ್ಯಗಳನ್ನು ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳೇ ತಯಾರಿಸಿ, ಭೋಜನ ವ್ಯವಸ್ಥೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.