ಕೂಡಿಗೆ, ಜು. ೩೧: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಬಾರಿ ಮಳೆಯಿಂದಾಗಿ ಕಾವೇರಿ ನದಿ ದಂಡೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟಗೊಂಡಿದ್ದು, ಬೆಳೆ ಹಾನಿಯಾದ ಪ್ರದೇಶಗಳಿಗೆ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು, ಕುಶಾಲನಗರ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅರುಣ್, ಹೆಬ್ಬಾಲೆ ಗ್ರಾಮ ಲೆಕ್ಕಾಧಿಕಾರಿ ಫೀರ್ ಮಹಮ್ಮದ್ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ಸ್ಥಳೀಯ ರೈತ ಪ್ರಮುಖರಾದ ಕಫೀನಪ್ಪ, ದಿನೇಶ್ ಸಂತೋಷ್ ಕೃಷ್ಣೇಗೌಡ, ದಿವಾಕರ್ ಸೇರಿದಂತೆ ಗ್ರಾಮಸ್ಥರು ಇದ್ದರು.