ಸಿದ್ದಾಪುರ, ಆ. ೧: ಮಣಿಪುರ ಜನಾಂಗಿಯ ಸಂಘರ್ಷದ ಕುರಿತು ಜಿಲ್ಲೆಯ ಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ತಾ.೬ ರಂದು ಸಿದ್ದಾಪುರದ ಗುಹ್ಯ ಅಗಸ್ತೆö್ಯÃಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಸಿಪಿಐಎಂ ಪಕ್ಷದ ಪ್ರಮುಖರು ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ, ಮೇ ೩ ರಿಂದ ದೇಶದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಎರಡು ಜನಾಂಗದ ನಡುವೆ ನಡೆದ ಸಂಘರ್ಷದಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಾಶವಾಗಿ ಪ್ರಾಣಹಾನಿ ಸಂಭವಿಸಿದರೂ ಕೇಂದ್ರ ಹಾಗೂ ಅಲ್ಲಿನ ಸರ್ಕಾರ ಘರ್ಷಣೆ ತಡೆಯುವಲ್ಲಿ ವಿಫ ಲವಾಗಿದೆ ಎಂದು ಆರೋಪಿಸಿದರು.

ಕಾರ್ಮಿಕ ಮುಖಂಡ ಮಹದೇವ್ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರ ಮೇಲೆ ಕಿರುಕುಳ, ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಕೂಡ ಸರಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆ ಯರನ್ನು ವಿವಸ್ತçಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ಇಡೀ ದೇಶ ತಲೆ ತಗ್ಗಿಸುವಂತಹ ಹೇಯ ಕೃತ್ಯವಾಗಿದ್ದು, ಪ್ರಧಾನಿ ಘಟನೆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಾತ್ಯತೀತ ಶಕ್ತಿಗಳಿಂದ ಹೋರಾಟ ರೂಪಿಸಿ, ಘಟನೆ ಕುರಿತು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿಯಿತ್ತಿರು. ಈ ಸಂದರ್ಭದಲ್ಲಿ ಎಂ.ಸಿ.ಸಾಬು, ಎನ್.ಡಿ ಕುಟ್ಟಪನ್ ಹಾಜರಿದ್ದರು.