ಮುಳ್ಳೂರು, ಆ. ೧: ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಮೀಪದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ನಡೆಯಿತು.

ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ನಿವೃತ್ತ ಮೇಜರ್ ಸುಬೇದಾರ್ ಎ.ಎಸ್.ಮಹೇಶ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎ.ಎಸ್. ಮಹೇಶ್, ಸೈನಿಕರು ದೇಶದ ರಕ್ಷಣೆಯಲ್ಲಿ ಸೇವೆ ಸಲ್ಲಿಸಿದರೆ; ಮಾಧ್ಯಮಗಳು ಸಮಾಜದ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ್ ಹಾನಗಲ್, ಶಾಲಾ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್, ಎಸ್.ಡಿ.ಎಂ.ಸಿ ಅಧ್ಯಕ್ಷ ತಮ್ಮಯ್ಯ, ಸಂಘದ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ವರ್ಗ ಹಾಜರಿದ್ದರು.