ಅಮ್ಮತ್ತಿ, ಆ. ೧: ಅಮ್ಮತ್ತಿ ಪುಲಿಯೇರಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಪುಲಿಯೇರಿ ಗ್ರಾಮದ ಇಂಜಿಲಗೆರೆಯ ಹರಿದಾಸ್ ಎಂಬವರಿಗೆ ಸೇರಿದ ತೋಟಕ್ಕೆ ಭಾನುವಾರ ಸಂಜೆ ಲಗ್ಗೆಯಿಟ್ಟ ಕಾಡಾನೆಗಳು ಅಡಿಕೆ ಹಾಗೂ ತೆಂಗಿನ ಗಿಡಗಳನ್ನು ನಾಶಪಡಿಸಿ ಅಪಾರ ಪ್ರಮಾಣದ ನಷ್ಟವಾಗಿದೆ. ಈ ಭಾಗದಲ್ಲಿ ನಿರಂತರವಾಗಿ ಕಾಡಾನೆ ಉಪಟಳ ಅಧಿಕವಾಗಿದ್ದು, ಬೆಳೆಗಳು ನಾಶವಾಗುತ್ತಿದೆ ಎಂದು ಆರೋಪಿಸಿ ರುವ ಗ್ರಾಮ ಪಂಚಾಯತ್ ಸದಸ್ಯ ವಕೀಲ ಎನ್.ಎಸ್. ಪ್ರಶಾಂತ್ ಕಾಡಾನೆ ಹಾವಳಿಯಿಂದ ಮಕ್ಕಳಿಗೆ ಶಾಲೆಗೆ ತೆರಳಲು ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಕೂಡಲೇ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಒತ್ತಾಯಿಸಿದ್ದಾರೆ.