ಮಡಿಕೇರಿ, ಆ. ೧ : ಜಿಲ್ಲೆಯಲ್ಲಿ ಕಳೆದ ಏಳು ತಿಂಗಳಲ್ಲಿ ಗಾಂಜಾ ಸಂಬAಧಿಸಿದAತೆ ೬೧ ಪ್ರಕರಣಗಳು ದಾಖಲಾಗಿದ್ದು, ೧೫೭ ಜನರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ೩೬ ಕೆ.ಜಿ.ಯಷ್ಟು ಗಾಂಜಾ ವಶಪಡಿಸಿ ಕೊಳ್ಳಲಾಗಿದೆ. ಸುಮಾರು ೬ ಕಡೆಗಳಲ್ಲಿ ಗಾಂಜಾ ಬೆಳೆಯುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಹಾಗೆಯೇ ೯೯ ಗ್ರಾಂ ಎಂಡಿಎAಎ(ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್) ಮತ್ತು ೯ ಬ್ಲಾಕ್‌ಗಳಲ್ಲಿ ಸ್ಟಿçಪ್ಸ್ ವಶಪಡಿಸಿ ಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಯುವಜನತೆ ಮದ್ಯ ಅಥವಾ ಮಾದಕ ವಸ್ತುಗಳಿಗೆ ತುತ್ತಾಗದೆ ವಿದ್ಯಾರ್ಜನೆಯತ್ತ ಗಮನಹರಿಸಬೇಕು. ಲಭ್ಯವಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ.

ಡಾ. ಮಹಾಂತ ಶಿವಯೋಗಿಗಳು ಮದ್ಯ ಹಾಗೂ ಮಾದಕ ವಸ್ತುಗಳ ವಿರುದ್ಧ ೭೦ ರ ದಶಕದಲ್ಲಿಯೇ ಜಾಗೃತಿ ಮೂಡಿಸಿದರು. ಡಾ. ಮಹಾಂತ ಶಿವಯೋಗಿಗಳ ಆದರ್ಶಗಳನ್ನು ತಿಳಿದುಕೊಂಡು ಮುನ್ನಡೆಯಬೇಕು ಎಂದರು ರಾಮರಾಜನ್ ಸಲಹೆಯಿತ್ತರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ. ಡೆವಿನ್ ಕರ್ಕಡ ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ನೆನಪಿನ ಶಕ್ತಿ ಕಡಿಮೆಯಾಗುತ್ತದೆ. ಜೊತೆಗೆ ದೈಹಿಕ ಮತ್ತು ಮಾನಸಿಕವಾಗಿ ಕುಗ್ಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮದ್ಯ ಹಾಗೂ ಮಾದಕ ವಸ್ತುಗಳಿಗೆ

(ಮೊದಲ ಪುಟದಿಂದ) ತುತ್ತಾದರೆ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರಿಂದ ರಾಷ್ಟçದ ಅಭಿವೃದ್ಧಿಗೆ ಹಿನ್ನೆಡೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಹೆಚ್ಚು ಬಳಸುವುದು ಸಹ ಒಂದು ರೀತಿ ವ್ಯಸನವಾಗಿದೆ. ರಾತ್ರಿ ವೇಳೆ ಹೆಚ್ಚು ಮೊಬೈಲ್ ನೋಡುವುದರಿಂದ ಒಂದು ರೀತಿ ಗೀಳು ಉಂಟಾಗಲಿದೆ. ಆದ್ದರಿಂದ ಯಾವುದೇ ರೀತಿಯ ಚಟಕ್ಕೂ ದಾಸರಾಗದಂತೆ ಎಚ್ಚರವಹಿಸುವುದು ಅತ್ಯಗತ್ಯ ಎಂದು ಡಾ. ಡೆವಿನ್ ಕರ್ಕಡ ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಮಾತನಾಡಿ ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗಬಾರದು. ಇತರರು ಬಲಿಯಾಗದಂತೆ ಎಚ್ಚರವಹಿಸುವುದು ಅತ್ಯಗತ್ಯ ಎಂದು ಹೇಳಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ ಡಾ. ಮಹಾಂತ ಶಿವಯೋಗಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್, ೧, ೧೯೩೦ರಲ್ಲಿ ಜನಿಸಿ ವ್ಯಸನ ಮುಕ್ತ ಸಮಾಜಕ್ಕೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

೧೯೭೦ ರಲ್ಲಿ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ೧೯ ನೇ ಪೀಠಾಧಿಕಾರಿಯಾಗಿ, ಅನ್ನದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ ಹೀಗೆ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮಾತನಾಡಿ ಡಾ. ಮಹಾಂತ ಶಿವಯೋಗಿಗಳ ಸಮಾಜ ಕಾರ್ಯ ಸ್ಮರಣೀಯ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಮಹಾಂತ ಸ್ವಾಮೀಜಿಗಳು ಶ್ರಮಿಸಿದ್ದಾರೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಉಪನ್ಯಾಸಕರಾದ ಚಿದಾನಂದ, ರಾಜಸುಂದರA, ಇತರರು ಇದ್ದರು.