ಕುಶಾಲನಗರ, ಆ. ೨: ಕುಶಾಲನಗರ ಮತ್ತು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿಗಳ ಸಭೆ ಕುಶಾಲನಗರದಲ್ಲಿ ನಡೆಯಿತು.

ಕುಶಾಲನಗರ ಗೌಡ ಸಮಾಜದಲ್ಲಿ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಬಗ್ಗೆ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮಾಹಿತಿ ನೀಡಲಾಯಿತು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸಲಹೆ ಸೂಚನೆಗಳ ವಿವರಗಳನ್ನು ಡಿ.ವೈ.ಎಸ್.ಪಿ. ಗಂಗಾಧರಪ್ಪ ಅವರು ಸಭೆಗೆ ಒದಗಿಸಿದರು. ಸಮಾಜದ ಸ್ವಾಸ್ಥö್ಯ ಕಾಪಾಡುವ ಸಂಬAಧ ಪೊಲೀಸರ ಜವಾಬ್ದಾರಿ ಕರ್ತವ್ಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಅಧಿಕಾರಿ ಸಿಬ್ಬಂದಿಗಳಿAದ ಠಾಣಾ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಡಿ.ವೈ.ಎಸ್.ಪಿ. ಗಂಗಾಧರಪ್ಪ ಅವರು ಸಭೆಯಲ್ಲಿ ಮಾಹಿತಿ ಪಡೆದರು.

ಈ ಸಂದರ್ಭ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಮತ್ತು ಗ್ರಾಮಾಂತರ, ಸಂಚಾರಿ, ಅಪರಾಧ ಮತ್ತು ಸುಂಟಿಕೊಪ್ಪ ವಿಭಾಗದ ಠಾಣಾಧಿಕಾರಿಗಳು, ಉಪಠಾಣಾಧಿಕಾರಿಗಳು, ಸಿಬ್ಬಂದಿಗಳು ಇದ್ದರು.