ಸುಂಟಿಕೊಪ್ಪ, ಆ. ೨: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ೨ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಗ್ರಾ.ಪಂ. ಸಭಾಂಗಣದಲ್ಲಿ ಬುಧವಾರ ನಡೆಯಿತು.
೨ನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ)ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಮಂದೋಡಿ ಜಗನ್ನಾಥ್ ಹಾಗೂ ಕೆ.ಎಂ. ಸುಭಾಷ್ ಸ್ಪರ್ಧಿಸಿದ್ದು, ಜಗನ್ನಾಥ್ ೭ ಮತಗಳನ್ನು ಪಡೆದರೆ ಕೆ.ಎಂ. ಸುಭಾಷ್ ೧ ಮತಗಳನ್ನಷ್ಟೇ ಗಳಿಸಿ ಪರಾಭವಗೊಂಡರು.
ಅಧ್ಯಕ್ಷರಾಗಿ ಜಗನ್ನಾಥ್ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಸತೀಶ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜು ಕಾರ್ಯನಿರ್ವಹಿಸಿದರು.
ನಾಕೂರು ಶಿರಂಗಾಲ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ್, ಗ್ರಾ.ಪಂ. ಸಿಬ್ಬಂದಿ ವರ್ಗದವರು ಹಾಜರಿದ್ದರು.