ಸಿದ್ದಾಪುರ, ಆ. ೩: ಗುಹ್ಯ, ಇಂಜಿಲಗೆರೆ ವ್ಯಾಪ್ತಿಯಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದ ಕಾಡಾನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಹಾಗೂ ಕೃಷಿಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಕೈಗೊಂಡು ಹತ್ತಕ್ಕೂ ಅಧಿಕ ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾಯಿತು