ಮಡಿಕೇರಿ, ಆ. ೪: ಮೀನುಗಾರಿಕೆ ಇಲಾಖೆ ಸೋಮವಾರಪೇಟೆ ತಾಲೂಕು ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಅವರ ಧ್ಯಾನಕ್ಕೆ ಬಿದ್ದ ಅಕ್ಷರಗಳು ಕವನ ಸಂಕಲನ ತಾ. ೬ ರಂದು (ನಾಳೆ) ಲೋಕಾರ್ಪಣೆಗೊಳ್ಳಲಿದೆ.
ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಹಾಗೂ ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಮಾರುತಿ ದಾಸಣ್ಣನವರ್ ಉದ್ಘಾಟಿಸಲಿದ್ದಾರೆಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‌ಕುಮಾರ್ ತಿಳಿಸಿದ್ದಾರೆ.
ಧ್ಯಾನಕ್ಕೆ ಬಿದ್ದ ಅಕ್ಷರಗಳು ಕವನ ಸಂಕಲನವನ್ನು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಲೋಕಾರ್ಪಣೆ ಮಾಡಲಿದ್ದಾರೆ. ಕವನ ಸಂಕಲನ ಕುರಿತು ಸಾಹಿತಿ ಕಾಜೂರು ಸತೀಶ್ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಅಮೃತ ವಿಶ್ವವಿದ್ಯಾನಿಲಯದ ದೃಶ್ಯ ಮತ್ತು ಸಂವಹನ ಮಾಧ್ಯಮ ವಿಭಾಗ ಮುಖ್ಯಸ್ಥೆ ಡಾ.ಬಾಲಾಡಿ ಮೌಲ್ಯ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಅಭಿನಯ ಕಲಾಮಿಲನ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಕುದುಕುಳಿ ಕೆ. ಭರತ್, ಸುಳ್ಯದ ರಂಗ ಮಯೂರಿ ಕಲಾ ಶಾಲೆಯ ಲೋಕೇಶ್ ಊರುಬೈಲು ಪಾಲ್ಗೊಳ್ಳಲಿದ್ದಾರೆ. ಭಾಗಮಂಡಲದ ಸ್ಫೂರ್ತಿ ಉಷಾ ನೃತ್ಯ ಪ್ರದರ್ಶನ ನೀಡಲಿದ್ದಾರೆ.