ವೀರಾಜಪೇಟೆ, ಆ. ೪: ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ಇಬ್ಬರನ್ನು ನ್ಯಾಯಾಧೀಶರು ಸಾಕ್ಷಾö್ಯಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದ್ದಾರೆ.
ಸಿದ್ದಾಪುರ ಠಾಣಾ ವ್ಯಾಪ್ತಿಯ ಚೆನ್ನಯ್ಯನಕೋಟೆ ಗ್ರಾಮದಲ್ಲಿ ೨೦೧೯ ರ ಏಪ್ರಿಲ್‌ನಲ್ಲಿ ಯುಗಾದಿ ಹಬ್ಬದ ಸಮಯದಲ್ಲಿ ಸ್ಥಳೀಯ ನಿವಾಸಿಗಳಾದ ಸಿ.ಟಿ. ದಿನೇಶ್, ಎಚ್.ಆರ್. ರಮೇಶ್ ಎಂಬವರು ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವAತೆ ತೆಂಗಿನಕಾಯಿ ಇಟ್ಟು ಕಲ್ಲು ಹೊಡೆಯುತ್ತಿದ್ದಾಗ ಸಮವಸ್ತçದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗಳಾದ ಭರತ್ ಆರ್.ಎಂ, ಸಂತೋಷ್ ಚೌಹಾಣ್ ಅವರು ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಆರೋಪಿಗಳಿಗೆ ತಿಳಿಸಿದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದ ಬಗ್ಗೆ ಮೊಕದ್ದಮೆ ದಾಖಲಾಗಿ ಕೇಸಿನ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ಪೊಲೀಸರು ನ್ಯಾಯಾಲಯದಲ್ಲಿ ಸಾಕ್ಷö್ಯ ನೀಡಿದ್ದು ಅಂತಿಮವಾಗಿ ವೀರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಕೊಠಾರಿ ಅವರು ಆರೋಪ ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದು ತೀರ್ಮಾನಿಸಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.