ಸೋಮವಾರಪೇಟೆ, ಆ.೩: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಸಾಧಿಸುವಲ್ಲಿ ಕೊಡಗು ಜಿಲ್ಲೆ ಹಿಂದುಳಿದಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಚ್ಛಾಶಕ್ತಿ ಯೊಂದಿಗೆ ವೈಯಕ್ತಿಕವಾಗಿ ಗಮನಹರಿಸಿ ಸರಕಾರದಿಂದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ರಾಜ್ಯದ ಇತರ ಜಿಲ್ಲೆಗಳ ಪ್ರಗತಿಗೆ ಹೋಲಿಸಿದರೆ ಕೊಡಗು ಜಿಲ್ಲೆ ಹಿಂದುಳಿದಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವೈಯಕ್ತಿಕ ಗಮನ ಹರಿಸಿ ಸರಕಾರ ಹಾಗೂ ಜಿಲ್ಲಾ ಪಂಚಾಯಿತಿಯಿAದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಗತ್ಯ ಕ್ರಮವಹಿಸಬೇಕೆಂದು ಸೂಚಿಸಿದ ಅವರು, ಮುಂದಿನ ಮಾಹೆಯ ಪ್ರಗತಿ ಪರಿಶೀಲನಾ ಸಭೆಗೆ ಪ್ರಗತಿಯು ಉತ್ತಮ ಮಟ್ಟದಲ್ಲಿರ ಬೇಕೆಂದು ತಾಕೀತು ಮಾಡಿದರು.
ಮಹಾತ್ಮಾಗಾಂಧಿ ರಾಷ್ಟಿçÃಯ ಗ್ರಾಮೀಣ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಉದ್ಯೋಗ ಖಾತ್ರಿ ಯೋಜನೆ, ವಸತಿ, ಎಸ್.ಬಿ.ಎಂ, ಡಿಜಿಟಲ್ ಲೈಬ್ರರಿ, ದೂರದೃಷ್ಟಿ ಯೋಜನೆ, ಜಲಜೀವನ್ ಮಿಷನ್, ಡಿಸಿಬಿ, ಗೃಹಲಕ್ಷಿö್ಮÃ ಯೋಜನೆ, ಸಕಾಲ ಮುಂತಾದ ವಿಷಯಗಳ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಯೋಜನಾಧಿಕಾರಿ ರಾಜ್‌ಗೋಪಾಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎನ್‌ಆರ್‌ಇಜಿ ಒಗ್ಗೂಡಿಸುವಿಕೆ ಇಲಾಖಾಧಿಕಾರಿಗಳು, ಅಭಿಯಂತರರು ಪಾಲ್ಗೊಂಡಿದ್ದರು.