ನವದೆಹಲಿ, ಆ. ೪: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ' ಹೇಳಿಕೆಗೆ ಸಂಬAಧಿಸಿದAತೆ ಮಾನನಷ್ಟ ಮೊಕದ್ದಮೆ ಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ ೨ ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಇದೀಗ ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ಬಚಾವ್ ಆಗಿದ್ದು, ಕೇರಳದ ವಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದಾರೆ.

ಪ್ರಕರಣ ಸಂಬAಧ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೋದಿ ಉಪನಾಮ ಟೀಕೆಗೆ ಸಂಬAಧಿಸಿದAತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.

ಗರಿಷ್ಠ ಶಿಕ್ಷೆಯನ್ನು ನೀಡುವಾಗ ವಿಚಾರಣಾ ನ್ಯಾಯಾಲಯವು ಅದರ ಕಾರಣಗಳನ್ನು ಬಹಿರಂಗಪಡಿಸಲಿಲ್ಲ ಎಂದು ಹೇಳಿದೆ. ನ್ಯಾಯಾಧೀಶರು ಅವರಿಗೆ ೨ ವರ್ಷಕ್ಕಿಂತ ಕಡಿಮೆ ಶಿಕ್ಷೆಯನ್ನು ನೀಡಿದ್ದಾರೆ, ವಯನಾಡ್ ಸಂಸದರಾಗಿ ಅನರ್ಹಗೊಳಿಸಲು ಕಾರಣವಾದ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ ೮ (೩) ರ ನಿಬಂಧನೆಗಳು ಅನ್ವಯಿಸುವುದಿಲ್ಲ ಎಂದು ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠವು ಅಭಿಪ್ರಾಯಪಟ್ಟಿದೆ.

(ಮೊದಲ ಪುಟದಿಂದ) ಹೇಳಿಕೆಗಳನ್ನು ನೀಡುವಾಗ ಎಚ್ಚರದಿಂದ ಮಾತನಾಡಬೇಕು. ಅಂದಿನ ನಿಮ್ಮ ಹೇಳಿಕೆ ಒಳ್ಳೆಯ ಉದ್ದೇಶದಿಂದ ಕೂಡಿರಲಿಲ್ಲ. ಇನ್ಮುಂದೆ ಜಾಗೃತೆ ವಹಿಸಿ. ನಿಮ್ಮನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡೋದರಿಂದ ನಷ್ಟ ಆಗಲಿದೆ ಎಂದ ಸುಪ್ರೀಂ ಕೋರ್ಟ್, ಜೈಲು ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಸಂಸದ ಸ್ಥಾನದಿಂದ ಮುಂದುವರಿಯಲಿದ್ದಾರೆ. ಅನರ್ಹತೆಯಿಂದ ಪಾರಾಗಿದ್ದಾರೆ. ರಾಹುಲ್ ಗಾಂಧಿ ಮತ್ತೆ ಲೋಕಸಭಾ ಚುನಾವಣೆಗೂ ಸ್ಪರ್ಧಿಸಬಹುದಾಗಿದೆ.

ಪ್ರಿಯಾಂಕಾ ಗಾಂಧಿ ಅವರೊಂದಿಗೆ ಎಐಸಿಸಿ ಕಚೇರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಹಂಚಿಕೊAಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಒಂದಲ್ಲಾ ಒಂದು ದಿನ ಸತ್ಯಕ್ಕೆ ಗೆಲುವು ಸಿಕ್ಕೆ ಸಿಗುತ್ತೆ, ಇವತ್ತಲ್ಲದಿದ್ದರೆ ನಾಳೆ ಅಥವಾ ನಾಡಿದ್ದು ಜಯ ಸಿಗುತ್ತದೆ. ನನ್ನ ಹಾದಿ ಸ್ಪಷ್ಟವಾಗಿದೆ. ನನ್ನ ಕೆಲಸವೇನೂ, ಏನು ಮಾಡಬೇಕು ಎಂಬುದರ ಬಗ್ಗೆ ಮನಸ್ಸಿನಲ್ಲಿ ಸ್ಪಷ್ಟತೆ ಇದೆ. ಜನರು ಪ್ರೀತಿ ಮತ್ತು ಬೆಂಬಲ ಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.