ಮಡಿಕೇರಿ, ಆ. ೩: ನಗರದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಬಳಿಯ ಅಂಗನವಾಡಿಗೆ ಅಪಾಯವನ್ನು ಆಹ್ವಾನಿಸುತ್ತಿದ್ದ ಮೂರು ಮರಗಳನ್ನು ಕೊನೆಗೂ ಅರಣ್ಯ ಇಲಾಖೆ ತೆರವುಗೊಳಿಸಿದೆ.

ಮರಗಳಿಂದ ಅಂಗನವಾಡಿಗೆ ಅಪಾಯವಿರುವ ಬಗ್ಗೆ ಪತ್ರಿಕೆ ವರದಿ ಮಾಡಿ ಅಧಿಕಾರಿಗಳ ಗಮನ ಸೆಳೆದಿತ್ತು. ಕಳೆದ ಅನೇಕ ದಿನಗಳಿಂದ ದೂರು ನೀಡಿದರೂ ಸ್ಪಂದನ ದೊರೆಯದೆ ಇರುವ ಬಗ್ಗೆ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. ಪತ್ರಿಕಾ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಇಂದು ಮೂರು ಮರಗಳನ್ನು ತೆರವು ಗೊಳಿಸಿತು. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸಹಕಾರ ನೀಡಿದರು.