ಸೋಮವಾರಪೇಟೆ, ಆ. ೩: ಪಟ್ಟಣದ ಹೈಟೆಕ್ ಮಾರುಕಟ್ಟೆ ಆವರಣದಲ್ಲಿ ಅಳವಡಿಸಿರುವ ವಿದ್ಯುತ್ ಕಂಬವೊAದು ಶಿಥಿಲಾವಸ್ಥೆಗೆ ತಲುಪಿದ್ದು, ಅಪಾಯ ಸಂಭವಿಸುವ ಮುನ್ನ ಪಟ್ಟಣ ಪಂಚಾಯಿತಿ ಹಾಗೂ ವಿದ್ಯುತ್ ಇಲಾಖೆ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಾರುಕಟ್ಟೆ ಆವರಣದಲ್ಲಿ ಅಳವಡಿಸಿರುವ ವಿದ್ಯುತ್ ಕಂಬ ಈಗಾಗಲೇ ಶಿಥಿಲಾವಸ್ಥೆಗೆ ತಲುಪಿದೆ. ಗಾರೆ ಕಿತ್ತು ಬರುತ್ತಿದೆ. ಇದೇ ಸ್ಥಳದಲ್ಲಿ ದಿನಂಪ್ರತಿ ವಾಹನಗಳು ನಿಲುಗಡೆಗೊಳ್ಳುತ್ತಿವೆ. ಸಂತೆ ದಿನದಂದು ಸಾವಿರಾರು ಮಂದಿ ಒಡಾಡುತ್ತಿರುತ್ತಾರೆ. ಅಪಾಯ ಸಂಭವಿಸುವ ಮುನ್ನ ವಿದ್ಯುತ್ ಕಂಬವನ್ನು ಬದಲಾಯಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.