ಕುಶಾಲನಗರ, ಆ. ೩: ಕುಶಾಲನಗರ ಬ್ಲಾಕ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನೆ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡರವರ ಸಮ್ಮುಖದಲ್ಲಿ ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾ.ಪಂ.ನ ಎರಡನೇ ಹಂತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾ ವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ಪಡೆಯಲು ಬೇಕಾದ ಕಾರ್ಯ ತಂತ್ರವನ್ನು ರೂಪಿಸುವ ಬಗ್ಗೆ ಶಾಸಕರಿಗೆ ಮನವಿ ಮಾಡಲಾಯಿತು.

ಸಭೆಯಲ್ಲಿ ಶಾಸಕರು ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಕೆಲಸ ಕಾರ್ಯಗಳು ಆಗದಿದ್ದಲ್ಲಿ ನೇರವಾಗಿ ತನ್ನ ಗಮನಕ್ಕೆ ತರುವಂತೆ ತಿಳಿಸಿದ ಶಾಸಕರು, ತನ್ನ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ಗಳನ್ನು ಸಲ್ಲಿಸಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜಿ.ಪಂ. ಮಾಜಿ ಸದಸ್ಯರಾದ ಲತೀಫ್, ಸುನಿತಾ, ಕಾಂಗ್ರೆಸ್ ಮುಖಂಡ ಕೆ.ಕೆ. ಮಂಜುನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ, ನಟೇಶ್ ಗೌಡ, ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಸದಸ್ಯ ಕಲೀಮುಲ್ಲಾ, ಕಾರ್ಯಕರ್ತರುಗಳಿದ್ದರು.