ಗೋಣಿಕೊಪ್ಪಲು, ಆ. ೩: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಸಂಪುಟ ದರ್ಜೆಯ ಸ್ಥಾನದೊಂದಿಗೆ ಅಧಿಕಾರ ವಹಿಸಿಕೊಂಡು ಜಿಲ್ಲೆಗೆ ಆಗಮಿಸಿದ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗಡಿಭಾಗವಾದ ತಿತಿಮತಿ ಆನೆಔಕೂರು ಗೇಟ್ ಬಳಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಗೋಣಿಕೊಪ್ಪಲು, ಆ. ೩: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಸಂಪುಟ ದರ್ಜೆಯ ಸ್ಥಾನದೊಂದಿಗೆ ಅಧಿಕಾರ ವಹಿಸಿಕೊಂಡು ಜಿಲ್ಲೆಗೆ ಆಗಮಿಸಿದ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗಡಿಭಾಗವಾದ ತಿತಿಮತಿ ಆನೆಔಕೂರು ಗೇಟ್ ಬಳಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಇಂದು ಲಭಿಸಿರುವ ಸ್ಥಾನಮಾನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕೊಡುಗೆಯಾಗಿದೆ. ಜನರ ಪ್ರೀತಿ, ಆಶೀರ್ವಾದದಿಂದ ಗೆಲುವು ಸಾಧಿಸಿರುವೆ, ಮುಖ್ಯಮಂತ್ರಿಗಳು ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ, ಕ್ಷೇತ್ರದ ಜನತೆಯ ಕಷ್ಟಕ್ಕೆ ಸ್ಪಂದಿಸುವುದಾಗಿ ನುಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆಪಿಸಿಸಿ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಡಿಸಿಸಿ ಪ್ರಮುಖರಾದ ಪಿ.ಕೆ. ಪೊನ್ನಪ್ಪ, ಟಾಟು ಮೊಣ್ಣಪ್ಪ, ಚೆಕ್ಕೆರ ವಾಸು ಕುಟ್ಟಪ್ಪ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲುವಿನ ಇಸ್ಮಾಯಿಲ್, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕೋಳೆರ ಭಾರತಿ, ಸೇವಾದಳದ ರಾಜ್ಯ ಕಾರ್ಯದರ್ಶಿ ತೆರಸ ವಿಕ್ಟರ್, ಮಾಜಿ ಜಿ.ಪಂ. ಸದಸ್ಯರಾದ ಮೂಕಳೇರ ಕುಶಾಲಪ್ಪ, ಪಿ.ಆರ್.ಪಂಕಜ, ಶ್ರೀಜಾ ಅಚ್ಚುತ್ತನ್ ಮತ್ತಿತರರು ಹಾಜರಿದ್ದರು.
- ಹೆಚ್.ಕೆ.ಜಗದೀಶ್