ಸಿದ್ದಾಪುರ, ಆ. ೩: ನೆಲ್ಲಿ ಹುದಿಕೇರಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಹೆಚ್.ಎನ್. ಧನಲಕ್ಷಿö್ಮÃ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳ ಟಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾ.ಪಂ. ಒಟ್ಟು ೨೦ ಮಂದಿ ಸದಸ್ಯರನ್ನು ಹೊಂದಿದ್ದು, ಬಿಜೆಪಿ ಬೆಂಬಲಿತ ಸದಸ್ಯರು ೪ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ೧೬ ಮಂದಿ ಇದ್ದಾರೆ.
ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತರಿAದ ಅಧ್ಯಕ್ಷ ಸ್ಥಾನಕ್ಕೆ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರೂ ಕೂಡ ನಾಮಪತ್ರ ಸಲ್ಲಿಕೆಯಲ್ಲಿ ಲೋಪ ಕಂಡುಬAದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿತು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ಪ್ರತಿಸ್ಪರ್ಧಿ ಇಲ್ಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಹೆಚ್.ಎನ್. ಧನಲಕ್ಷಿö್ಮÃ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಮೀನುಗಾರಿಕೆ ಇಲಾಖೆಯ ಸಚಿನ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ಮಾಜಿ ಗ್ರಾ.ಪಂ ಅಧ್ಯಕ್ಷರಾದ ಸಾಬು ವರ್ಗೀಸ್, ಎ. ಕೆ. ಹಕೀಂ, ಮಾಜಿ ಉಪಾಧ್ಯಕ್ಷರಾದ ದಮಯಂತಿ, ಗ್ರಾ.ಪಂ ಸದ ಸ್ಯರುಗಳು, ಯುವ ಕಾಂಗ್ರೆಸ್ ಮುಖಂಡ ಶಿಹಾಬ್, ಪಕ್ಷದ ಮುಖಂಡರಾದ ಹಳಗದ್ದೆ ಮಾದಪ್ಪ, ನಿರ್ವಾಣಿ ವಿಜಯ್ ಇನ್ನಿತರರು ಹಾಜರಿದ್ದರು.