ಸೋಮವಾರಪೇಟೆ, ಆ. ೪ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ನಗರ ಕಾಂಗ್ರೆಸ್ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ, ರೋಗಿಗಳ ಶೀಘ್ರ ಚೇತರಿಕೆಗೆ ಆಶಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಖಜಾಂಚಿ ಚೇತನ್, ಪ.ಪಂ. ಸದಸ್ಯ ಬಿ.ಸಿ. ವೆಂಕಟೇಶ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಉಪಾಧ್ಯಕ್ಷ ಜಮೀರ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹೆಚ್.ಬಿ. ರಾಜಪ್ಪ, ಮುಖಂಡರಾದ ಮಧುಸೂದನ್, ಸ್ವಾಮಿ, ವಿನಯ್, ಮೀನಾಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.