ಸುAಟಿಕೊಪ್ಪ, ಆ. ೩ : ಇಂದು ನಿಗದಿಯಾಗಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ೨ನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯನ್ನು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ವರದರಾಜ್ ತಾ.೧೦ ಕ್ಕೆ ಮುಂದೂಡಿದರು.
ಅಧ್ಯಕ್ಷ ಸ್ಥಾನವು ಬಿಸಿಎಂ (ಎ) ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು, ಗುರುವಾರದಂದು ನಿಗದಿಯಾಗಿದ್ದ ಚುನಾವಣಾ ಪ್ರಕ್ರಿಯೆ ಪ್ರಾರಂಭಗೊAಡು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ವರದರಾಜ್ ಅವರು ಸಲ್ಲಿಕೆಯಾಗಿದ್ದ ೭ ಅಧ್ಯಕ್ಷ ಆಕಾಂಕ್ಷಿಗಳ ನಾಮಪತ್ರ ಪರಿಶೀಲನೆ ಸಂದರ್ಭ ಸಂಬAಧಿಸಿದ ಆಭ್ಯರ್ಥಿಗಳು ಆಯಾ ತಾಲೂಕು ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರ ನಾಮಪತ್ರದ ಜೊತೆಗೆ ಸಲ್ಲಿಸಬೇಕಾಗಿದೆ. ಆದರೆ, ಪ್ರಸ್ತುತ ಆಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳ ಜೊತೆ ಜಾತಿ ಪ್ರಮಾಣ ಪತ್ರ ಇಲ್ಲವಾದ್ದರಿಂದ ನಾಮಪತ್ರಗಳು ತಿರಸ್ಕೃತಗೊಳ್ಳುತ್ತವೆ ಎಂದು ಹೇಳಿದರಲ್ಲದೆ ಜಾತಿ ಪ್ರಮಾಣ ಪತ್ರ ಒದಗಿಸಲು ೭ ದಿನಗಳ ಕಾಲಾವಕಾಶ ನೀಡಿ ಚುನಾವಣೆಯನ್ನು ತಾ.೧೦ ಕ್ಕೆ ಮುಂದೂಡಿದರು.
ಅಭ್ಯರ್ಥಿಗಳು ಚುನಾವಣಾ ಅಧಿಕಾರಿ ಬಳಿ ಈ ಬಗ್ಗೆ ಸ್ಪಷ್ಟನೆ ಬಯಸಿದಾಗ ಚುನಾವಣಾ ಪ್ರಕ್ರಿಯೆಯನ್ನು ಮಾನದಂಡದAತೆ ನಡೆಸಬೇಕಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಕೆಲವು ಅಭ್ಯರ್ಥಿಗಳು ಚುನಾವಣಾ ಅಧಿಕಾರಿಯೊಂದಿಗೆ ಚರ್ಚೆಗೆ ಮುಂದಾಗಿದ್ದರು. ಈ ಹಂತದಲ್ಲಿ ಕೆಲವು ಸದಸ್ಯರು ಚುನಾವಣೆ ಮುಂದೂಡಿಕೆ ಎಂದು ತಿಳಿದ ಕೂಡಲೇ ಚುನಾವಣಾ ಪ್ರಕ್ರಿಯೆ ಸಭೆಯಿಂದ ಹೊರನಡೆದಿದ್ದಾರೆ.
ಈ ಸಂದರ್ಭ ಒಳಗಿನ ಬೆಳವಣಿಗೆಯ ಬಗ್ಗೆ ಮಾಹಿತಿ ತಿಳಿದ ಬಿಜೆಪಿಯ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಎಸ್‌ಡಿಪಿಐನ ಜಿಲ್ಲಾ ಸಮಿತಿ ಸದಸ್ಯ ಉಸ್ಮಾನ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಜಿ.ಪಂ.ಮಾಜಿ ಸದಸ್ಯ ಪಿ.ಎಂ. ಲತೀಫ್ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಚುನಾವಣೆಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಚುನಾವಣಾಧಿಕಾರಿ ವರದರಾಜ್ ಅವರು ಚುನಾವಣಾ ಪ್ರಕ್ರಿಯೆಯಂತೆ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ೭ ಮಂದಿ ಅಧ್ಯಕ್ಷ ಸ್ಥಾನÀಕ್ಕೆ ೨ ಮಂದಿ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ಸಂದರ್ಭ ಚುನಾವಣಾ ಆಯೋಗ ನಿರ್ದೇಶನದಂತೆ ನಾಮಪತ್ರಗಳಲ್ಲಿ ಜಾತಿ ಪ್ರಮಾಣಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಎಲ್ಲಾ ನಾಮಪತ್ರಗಳನ್ನು ತಿರಸ್ಕರಿಸಿ ತಾ. ೧೦ರಂದು ಚುನಾವಣೆ ನಡೆಸಲಾಗುವುದೆಂದು ಹೇಳಿದರು.
ಬಿ.ಬಿ.ಭಾರತೀಶ್ ಮಾತನಾಡಿ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯನ್ನು ಮೀರಿ ವರ್ತಿಸಿದ್ದು, ಚುನಾವಣೆ ಮುಂದೂಡುವ ಮೊದಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕಾಗಿತ್ತು. ಈ ಕುರಿತು ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಲಾಗುವುದೆಂದು ಹೇಳಿದರು.
ಎಸ್‌ಡಿಪಿಐನ ಉಸ್ಮಾನ್ ಮಾತನಾಡಿ, ನಾಮಪತ್ರ ಸಲ್ಲಿಕೆಯ ಕುರಿತು ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಾಗಿತ್ತು. ನಾಮಪತ್ರ ಸಲ್ಲಿಕೆಯ ದಿನ ಆಕ್ಷೇಪಣೆ ಮಾಡಿ ನಾಮಪತ್ರವನ್ನು ತಿರಸ್ಕರಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದರಲ್ಲದೆ ಚುನಾವಣಾಧಿಕಾರಿ ಯಾವುದೋ ಪ್ರಭಾವಕ್ಕೆ ಒಳಗಾದಂತೆ ವರ್ತಿಸಿದ್ದಾರೆಂದು ನೇರವಾಗಿ ಆರೋಪಿಸಿದರು.
ವಿ.ಪಿ.ಶಶಿಧರ್ ಮಾತನಾಡಿ ಚುನಾವಣಾ ಅಧಿಕಾರಿಯ ಕ್ರಮ ಸರಿಯಾಗಿದೆ; ನಾವು ಇದನ್ನು ಒಪ್ಪಿಕೊಂಡಿದ್ದು ತಾ. ೧೦ ರಂದು ಚುನಾವಣೆಯನ್ನು ಎದುರಿಸುತ್ತೇವೆ ಮಾತ್ರವಲ್ಲ ಗೆಲ್ಲುತ್ತೇವೆ ಎಂದರಲ್ಲದೆ, ಬಿಜೆಪಿಯ ಕೆಲವು ಸದಸ್ಯರು ಮತ್ತು ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದರು.
ಈ ಸಂದರ್ಭ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಎಸ್.ಐ. ಹೆಚ್.ಸಿ.ಸ್ವಾಮಿ, ಸಿಬ್ಬಂದಿ ಬಂದೋಬಸ್ತ್ ಕಲ್ಪಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಬಿ.ಎಚ್.ವೇಣುಗೋಪಾಲ್, ಸಿಬ್ಬಂದಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.