ಸೋಮವಾರಪೇಟೆ, ಆ. ೫: ಇಲ್ಲಿನ ಕುರುಹಿನ ಶೆಟ್ಟಿ ಸಮಾಜದ ವಾರ್ಷಿಕ ಮಹಾಸಭೆ ಅಧ್ಯಕ್ಷ ಬಿ.ಸಿ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ರಾಮ ಮಂದಿರದಲ್ಲಿ ಜರುಗಿತು. ಸಭೆಯಲ್ಲಿ ಮಾತನಾಡಿದ ಬಿ.ಸಿ ವೆಂಕಟೇಶ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು. ವಿದ್ಯೆಯೇ ನಿಜವಾದ ಸಂಪತ್ತಾಗಿದ್ದು, ಉತ್ತಮ ಅಂಕಗಳಿAದ ತೇರ್ಗಡೆ ಹೊಂದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ಸಮಾಜ ಮುಖಿಯಾಗಬೇಕೆಂದರು. ಇದೇ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಾಗೂ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಮಾಜದ ಹಿರಿಯರಾದ ಬಿ.ಎಸ್. ಅನಂತರಾಮ್, ಬಿ.ಡಿ. ಮಂಜುನಾಥ್, ಕಾರ್ಯಕಾರಿ ಮಂಡಳಿ ಸದಸ್ಯರುಗಳಾದ ಸತೀನ್ ಸಿದ್ದಣ್ಣ, ಮಂಜುನಾಥ್, ಪ್ರಕಾಶ್, ಕೆ. ಸತೀಶ್, ಜ್ಯೋತಿ ಶುಭಕರ್, ಲೀಲಾ ನಿರ್ವಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.