ಜ್ಞಾನವಾಪಿ ಪ್ರಕರಣ : ಸಮೀಕ್ಷೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ, ಆ. ೪: ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆ ನಡೆಸಲು ಅಹಮದಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ವಿರೋಧಿಸಿ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಮೀಕ್ಷೆಯು ಇತಿಹಾಸವನ್ನು ಕೆದಕುತ್ತದೆ. ಇದು ‘ಹಿಂದಿನ ಗಾಯಗಳನ್ನು ಮತ್ತೆ ತೆರೆದಂತಾಗುತ್ತದೆ' ಎಂದು ಮುಸ್ಲಿಂ ಸಂಘಟನೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿತ್ತು. ಮಸೀದಿ ನಿರ್ವಹಣಾ ಸಮಿತಿಯ ಪರವಾಗಿ ಹಾಜರಾದ ಹಿರಿಯ ವಕೀಲ ಹುಝೆಫಾ ಅಹ್ಮದಿ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ವಾದಿಸಿದ್ದು, ಎಎಸ್‌ಐ ಕ್ರಮ ‘ಇತಿಹಾಸವನ್ನು ಅಗೆಯುತ್ತಿದೆ'. ಇದು ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದು ಭ್ರಾತೃತ್ವ ಮತ್ತು ಜಾತ್ಯತೀತತೆಯ ಪ್ರಭಾವ ಬೀರುತ್ತದೆ ಎಂದು ವಾದಿಸಿದ್ದರು. ನಿಮ್ಮ ಆಕ್ಷೇಪಣೆಗಳನ್ನು ವಿಚಾರಣೆಯ ಸಮಯದಲ್ಲಿ ನಿರ್ಧರಿಸಲಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.

ಮಣಿಪುರ : ಬೃಹತ್ ಪ್ರಮಾಣದ ಶಸ್ತಾçಸ್ತç, ಮದ್ದುಗುಂಡು ಲೂಟಿ

ಇಂಫಾಲ, ಆ. ೪: ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಎರಡು ಪೊಲೀಸ್ ಭದ್ರತಾ ಪೋಸ್ಟ್ಗಳನ್ನು ಧ್ವಂಸಗೊಳಿಸಿರುವ ಉದ್ರಿಕ್ತ ಗುಂಪುಗಳು, ಬೃಹತ್ ಶಸ್ತಾçಸ್ತç ಮತ್ತು ಮದ್ದುಗುಂಡುಗಳನ್ನು ದೋಚಿದ್ದಾರೆ. ಕೌತ್ರುಕ್‌ನಲ್ಲಿ ಸಶಸ್ತç ದಾಳಿಕೋರರು ಮತ್ತು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಬಿಷ್ಣುಪುರದಲ್ಲಿರುವ ಮಣಿಪುರ ಸಶಸ್ತç ಪೊಲೀಸ್‌ನ ೨ನೇ ಬೆಟಾಲಿಯನ್‌ನ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಮತ್ತು ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್ಗೆ ಗುಂಪು ದಾಳಿ ಮಾಡಿ ಅಪಾರ ಪ್ರಮಾಣದ ಶಸ್ತಾçಸ್ತçಗಳು ಮತ್ತು ಮದ್ದುಗುಂಡುಗಳನ್ನು ತೆಗೆದುಕೊಂಡು ಹೋಗಿದೆ ಎಂದು ಮಣಿಪುರ ಪೊಲೀಸರು ಗುರುವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ - ಬಂಧನ

ಬೆAಗಳೂರು, ಆ. ೪: ೧೦ ವರ್ಷದ ಡಿಸ್ಲೆಕ್ಸಿಕ್ (ನಿಧಾನಗತಿಯಲ್ಲಿ ಮಾತನಾಡುವುದು, ತಡವಾಗಿ ಪ್ರತಿಕ್ರಿಯಿಸುವುದು)ನಿಂದ ಬಳಲುತ್ತಿದ್ದ ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ. ೬೫ ವರ್ಷದ ಆರೋಪಿ ಶಾಲೆಯ ಮಾಲೀಕನೂ ಆಗಿದ್ದಾನೆ. ಗುರುವಾರ ಬೆಳಿಗ್ಗೆ ೧೧.೩೦ರ ಸುಮಾರಿಗೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯ ಖಾಲಿ ತರಗತಿಯೊಳಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿಗೆ ಆಮಿಷವೊಡ್ಡಿದ ಪ್ರಾಂಶುಪಾಲ ಆಕೆಯನ್ನು ತರಗತಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಮನೆಗೆ ಹಿಂದಿರುಗಿದ ನಂತರ, ಸಂತ್ರಸ್ತೆ ತನ್ನ ತಾಯಿಗೆ ತನ್ನ ನೋವಿನ ಬಗ್ಗೆ ವಿವರಿಸಿದ್ದಾಳೆ. ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ರಾಜ್ಯಸಭೆಯಲ್ಲಿ ಗದ್ದಲ - ಮುಂದೂಡಿಕೆ

ನವದೆಹಲಿ, ಆ. ೪: ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸದನವನ್ನು ತಾ. ೭ಕ್ಕೆ ಮುಂದೂಡಿದರು. ರಾಜಸ್ಥಾನ ಮತ್ತು ಮಣಿಪುರ ಹಿಂಸಾಚಾರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು. ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಷಯವನ್ನು ಚರ್ಚಿಸಲು ಬಯಸಿದವು. ಈ ವಿಚಾರದ ಕುರಿತು ಚರ್ಚೆಯಾಗಲಿ ಎಂದು ಒತ್ತಾಯಿಸಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದ ಬಗ್ಗೆ ಘೋಷಣೆಗಳನ್ನು ಕೂಗಿದರು. ಸಭಾಪತಿ ಜಗದೀಪ್ ಧಂಖರ್ ಅವರು, ನೀವು ವಿರೋಧ ಪಕ್ಷಗಳ ಸದಸ್ಯರು ಮಾತನಾಡುವುದನ್ನು ತೀವ್ರ ಗಮನದಿಂದ ಕೇಳಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲ್ಲ

ಬೆಂಗಳೂರು, ಆ. ೪: ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣಕ್ಕೆ ಎಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ, ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬAಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿಗಳು, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಲ್ಲಿನ ಅನುದಾನಗಳನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ-ಪಂಗಡಗಳಿಗೆ ಮೀಸಲಿರಿಸಿದ ಅನುದಾನಗಳನ್ನು ಇತರ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುತ್ತಿದ್ದ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಕಾಯ್ದೆ ೨೦೧೩ರ ಸೆಕ್ಷನ್ ೭(ಡಿ)ಯನ್ನು ರದ್ದುಮಾಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ. ಬಜೆಟ್‌ನಲ್ಲೂ ಈ ಬಗ್ಗೆ ಘೋಷಿಸಲಾಗಿದೆ. ಸೆಕ್ಷನ್ ೭(ಡಿ) ಅಡಿಯಲ್ಲಿದ್ದ ಕಾರಣಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ರಸ್ತೆ, ಸೇತುವೆಗಳಿಗೆ ಬಳಸಲು ಅವಕಾಶವಿತ್ತು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಆಗುತ್ತಿದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ನಿಲ್ಲಿಸಿದೆ ಎಂದು ತಿಳಿಸಿದ್ದಾರೆ.