ಕೂಡಿಗೆ, ಆ. ೫: ಯುಜಿಸಿ ಪದವಿಗಳನ್ನು ನೀಡಲು ಚಿಕ್ಕಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (Uಉಅ) ದಿಂದ ಅಧಿಕೃತ ಮಾನ್ಯತೆ ದೊರೆತಿದೆ.
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (Uಉಅ) ತನ್ನ ಅಧಿನಿಯಮ ೧೯೫೬ರ ಪ್ರಕರಣ ೨ (ಎಫ್) ಅಡಿಯಲ್ಲಿ ಕೊಡಗು ವಿಶ್ವವಿದ್ಯಾಲಯಕ್ಕೆ ಮಾನ್ಯತೆಯನ್ನು ನೀಡಿ ಪ್ರಕಟಣೆ ಹೊರಡಿಸಿದೆ. ಯುಜಿಸಿ ಮಾನ್ಯತೆ ಸಿಕ್ಕಿರುವುದರಿಂದ ಕೊಡಗು ವಿಶ್ವವಿದ್ಯಾಲಯವು ಯುಜಿಸಿ ಅಡಿಯಲ್ಲಿ ಬರುವ ವಿವಿಧ ಪದವಿಗಳನ್ನು ನೀಡಲು ಅಧಿಕೃತ ಮಾನ್ಯತೆಯನ್ನು ಪಡೆದಂತಾಗಿದೆ. ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿರುವ ಸಂಯೋಜಿತ ಮಹಾವಿದ್ಯಾಲಯಗಳು ಮತ್ತು ಘಟಕ ಮಹಾವಿದ್ಯಾಲಯದ ವತಿಯಿಂದ ೨೦೨೩-೨೪ ನೇ ಶೈಕ್ಷಣಿಕ ಸಾಲಿನ ಪದವಿ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಡಿದ್ದು ಯುಜಿಸಿಯಿಂದ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ ಎಂದು ಕುಲಪತಿ ಪ್ರೊ. ಅಶೋಕ್ ಹರ್ಷ ವ್ಯಕ್ತಪಡಿಸಿದ್ದಾರೆ.