ಸೋಮವಾರಪೇಟೆ, ಆ. ೪: ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾವನ್ನು ಯಾರೋ ಕಿಡಿಗೇಡಿಗಳು ಅಪಹರಿಸಿರುವ ಕುರಿತು ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ ಶಾಲೆ ಸಮೀಪದ ಅರಣ್ಯ ಪ್ರದೇಶದಲ್ಲಿ ಅವ್ಯಾಹತವಾಗಿ ಮರ ಸಾಗಾಟ ಪ್ರಕರಣವು ನಡೆಯುತ್ತಿದ್ದು ಅವರ ಮೇಲೂ ಸಂಶಯ ವ್ಯಕ್ತವಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಸತ್ಯಾಂಶ ಹೊರಬೀಳಬೇಕಿದೆ.