ಸೋಮವಾರಪೇಟೆ, ಆ. ೫: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ’ ಹೇಳಿಕೆಗೆ ಸಂಬAಧಿಸಿದAತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನೆಲೆ ಸೋಮವಾರ ಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ಪರ ಜಯಘೋಷ ಮೊಳಗಿಸಿದರು. ಈ ಸಂದರ್ಭ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಸಿ. ನಾಗೇಶ್, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಜನತೆಯ ಎದುರು ತೆರೆದಿಡುತ್ತಿರುವ ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಲು ನಡೆಸಿದ ಯತ್ನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿ ರುವುದು ಶ್ಲಾಘನೀಯ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ಹಾಗೂ ಕಾಂಗ್ರೆಸ್ ಮುಖಂಡ ಕೆ.ಎ. ಯಾಕೂಬ್ ಅವರುಗಳು ಮಾತನಾಡಿದರು.
ಈ ಸಂದರ್ಭ ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಫಿ, ಜೇಕಬ್ ಸೈಮನ್, ಜಮೀರ್ ಖಾನ್, ಮೋಹನ್, ಕೆ.ಎ. ಆದಂ, ಗೌರಮ್ಮ, ರಘು, ಮದನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.