ಕೂಡಿಗೆ, ಆ. ೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಮತ್ತು ಯಡವನಾಡು ಮೂಲಕ ಹಾರಂಗಿಗೆ ತೆರಳುವ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ಜಮೀನಿಗೆ ಬೆಂಡೆಬೆಟ್ಟದ ಕಡೆಯಿಂದ ಬರುವ ಕಾಡಾನೆಗಳು ಹಾರಂಗಿ ನದಿಯನ್ನು ದಾಟಿ ಬಂದು ಈ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆಯನ್ನು ನಾಶಪಡಿಸಿವೆ.
ಹಾರಂಗಿಯ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ದಿನೇಶ್ ಮತ್ತು ಸಜನ್ ಅವರ ತೋಟ ಸೇರಿದಂತೆ ಅನೇಕ ರೈತರ ಜಮೀನಿಗೆ ದಾಳಿ ಮಾಡಿ ಬಾಳೆ, ಅಡಿಕೆ, ಕಾಫಿ ಗಿಡಗಳನ್ನು ತುಳಿದು, ತಿಂದು ನಷ್ಟಪಡಿಸಿವೆ.
ಸಂಬAಧಿಸಿದ ಅರಣ್ಯ ಇಲಾಖೆಯವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಕೃಷಿಕರು ಆರೋಪಿಸಿದ್ದಾರೆ.