ಸುಂಟಿಕೊಪ್ಪ, ಆ. ೫: ಕೊಡಗರಹಳ್ಳಿಯ ಮಾರುತಿ ನಗರದ ಬಳಿ ನಿಲ್ಲಿಸಿದ್ದ ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ಎರಡು ವಾಹನಗಳು ಪಲ್ಟಿಯಾಗಿವೆ.

ಕೊಡಗರಹಳ್ಳಿಯ ನಿವಾಸಿ ಮಂಜು ಎಂಬವರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು (ಕೆ.ಎ.೧೯ ಎಂ.ಎಫ್.೯೩೪೫) ಮಧ್ಯರಾತ್ರಿ ೧.೩೦ರ ಸಮಯದಲ್ಲಿ ಅತೀ ವೇಗದಿಂದ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಾಗೂ ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮೂರು ವಾಹನಗಳು ನಜ್ಜುಗುಜ್ಜಾಗಿದ್ದು, ಮಂಗಳೂರಿನಿAದ ಬರುತ್ತಿದ್ದ ಕಾರಿನಲ್ಲಿದ್ದ ಓರ್ವ ಯುವತಿ ನಾಲ್ವರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.