ಪಾಲಿಬೆಟ್ಟ, ಆ. ೫: ಒಟ್ಟು ೯ ಸದಸ್ಯ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ೫ ಬಿಜೆಪಿ ೪ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದಾರೆ. ಮೊದಲನೇ ಅವಧಿಯಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನೇತ್ರ ಅಧ್ಯಕ್ಷರಾಗಿದ್ದರು. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಂ.ಬಿ ಪವಿತ್ರ ಆಯ್ಕೆಯಾಗಿದ್ದರು. ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಹಿಂದುಳಿದ ವರ್ಗದ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಲೀಲಾವತಿ ಸ್ಪರ್ಧಿಸಿ ೫ ಮತಗಳನ್ನು ಪಡೆದು ಗೆಲುವು ಸಾಧಿಸಿದರು. ರೇಖಾ ಗಣಪತಿ ೫ ಮತಗಳನ್ನು ಪಡೆದು ಗೆಲುವು ಸಾಧಿಸಿದರು.

ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಶಿವಮೂರ್ತಿ ಕಾರ್ಯನಿರ್ವಹಿಸಿದರು. ಚುನಾವಣಾ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಕಾರ್ಯದರ್ಶಿ ಶೀಭಾ, ಪಾಲಿಬೆಟ್ಟ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕುಟ್ಟಂಡ ವಸಂತ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರುಂಬಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.