ಮಡಿಕೇರಿ, ಆ. ೫: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೯ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ತಾ. ೧೧ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.