ಚೆಯ್ಯಡಾಣೆ, ಆ. ೭: ವೀರಾಜಪೇಟೆ ಅರಣ್ಯ ವಲಯದ ಚೆಯ್ಯಂಡಾಣೆ ವ್ಯಾಪ್ತಿಗೆ ಬರುವ ಗ್ರಾಮಗಳಾದ ನರಿಯಂದಡ, ಕೊಕೇರಿ, ಚೇಲಾವರ, ಕರಡ, ಅರಪಟ್ಟು, ಪೋದವಾಡ ಹಾಗೂ ಮರಂದೋಡ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ. ೮ ಹಾಗೂ ೯ ರಂದು ನಡೆಯಲಿದೆ.

ಈ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ತೋಟದ ಮಾಲೀಕರು, ತೋಟದ ಕೆಲಸಗಳನ್ನು ನಿಲ್ಲಿಸುವಂತೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇದ್ದು ಇಲಾಖೆಯೊಂದಿಗೆ ಸಹಕರಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಶರಣ ಬಸಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು ಹಾಗೂ ವೀರಾಜಪೇಟೆ ವಲಯ ಅರಣ್ಯಧಿಕಾರಿ ಕೆ.ಎಂ.ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.