ಸಿದ್ದಾಪುರ, ಆ. ೬: ಹೊಸ್ಕೇರಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕ ಮಂಥರ್ ಗೌಡ, ಈ ಭಾಗದ ರಸ್ತೆಗಳು ತೀರಾ ಹದಗೆಟ್ಟಿರುವ ಬಗ್ಗೆ ಸಾರ್ವಜನಿಕರ ಹಾಗೂ ಗ್ರಾಮಸ್ಥರ ದೂರುಗಳು ಬಂದಿವೆ. ಮುಂದಿನ ದಿನಗಳಲ್ಲಿ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ವೈ. ಪ್ರಭುಶೇಖರ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಸ್ಥಳೀಯರಾದ ನೆಲ್ಲಮಕ್ಕಡ ಪ್ರಕಾಶ್, ಜಯಣ್ಣ ಹಾಗೂ ಇನ್ನಿತರರು ಹಾಜರಿದ್ದರು.