ದೇಶದ ೫೦೮ ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ

ನವದೆಹಲಿ, ಆ. ೬: ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ದೇಶದಾದ್ಯಂತ ೫೦೮ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಭಾನುವಾರ ವರ್ಚ್ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ ೨೭ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ೫೦೮ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ. ಇಂದು ರೈಲ್ವೆ ವಲಯಕ್ಕೆ ಒಂದು ಹೆಗ್ಗುರುತು ದಿನ. ಐತಿಹಾಸಿಕ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾರತದಾದ್ಯಂತ ೫೦೮ ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಅಡಿಪಾಯ ಹಾಕಲಾಗುತ್ತದೆ. ಸುಮಾರು ೨೫,೦೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುವ ಯೋಜನೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಅಭಿವೃದ್ಧಿಯ ಗುರಿಯ ಕಡೆಗೆ ಚಲಿಸುತ್ತಿರುವ ಭಾರತ ಈಗ ಸುವರ್ಣ ಯುಗದ ಆರಂಭದಲ್ಲಿದೆ. ಭಾರತೀಯರಲ್ಲಿ ಹೊಸ ಶಕ್ತಿ, ಹೊಸ ಉತ್ಸಾಹ, ಸ್ಫೂರ್ತಿ ಮತ್ತು ಹೊಸ ನಿರ್ಣಯ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ, ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ ಎಂದರು. ಪ್ರತಿ ಅಮೃತ ನಿಲ್ದಾಣಗಳು ನಗರದ ಆಧುನಿಕ ಸ್ಪೂರ್ತಿ ಮತ್ತು ಪುರಾತನ ಸಂಪ್ರದಾಯಗಳನ್ನು ಬಿಂಬಿಸುತ್ತದೆ. ಭಾರತೀಯ ರೈಲ್ವೆಯನ್ನು ಆಧುನೀಕರಣಗೊಳಿಸಿ ಪರಿಸರ ಸ್ನೇಹಿಯನ್ನಾಗಿ ಮಾಡುವುದಕ್ಕೆ ನಾವು ಒತ್ತು ನೀಡುತ್ತೇವೆ ಎಂದರು.

ಭಾರತೀಯ ಸೇನಾಪಡೆಯಿಂದ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ, ಆ. ೬: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. ರಜೌರಿ ಜಿಲ್ಲೆಯ ಬರಿಯಾಮಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದAತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್‌ಕೌಂಟರ್ ನಡೆಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ನಗ್ನ ಮೆರವಣಿಗೆ ಪ್ರಕರಣ-ಪೊಲೀಸರ ಅಮಾನತ್ತು

ಇಂಫಾಲ್, ಆ. ೬: ಮಣಿಪುರದಲ್ಲಿ ಮೇ ೪ ರಂದು ಗುಂಪೊAದು ಇಬ್ಬರು ಮಹಿಳೆಯರನ್ನು ವಿವಸ್ತçಗೊಳಿಸಿ ಮೆರವಣಿಗೆ ಮಾಡಿದ ಘಟನೆಗೆ ಸಂಬAಧಿಸಿದAತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜುಲೈ ೧೯ ರಂದು ಘಟನೆಯ ವೀಡಿಯೊ ವೈರಲ್ ಆದ ನಂತರ ಮಣಿಪುರ ಪೊಲೀಸರು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಷೆö್ಮöÊ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲು ನಿರ್ಧರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮವನ್ನು ತ್ವರಿತವಾಗಿ ತೆಗೆದುಕೊಳ್ಳಲಾಗಿದೆ ಮತ್ತು ಅವರ ಅಮಾನತು ಹಿಂಪಡೆಯಬೇಕು ಎಂದು ಬಹುಸಂಖ್ಯಾತ ಸಮುದಾಯದ ಜನರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ರೈಲು ಅವಘಡ-೧೫ ಮಂದಿ ಸಾವು

ಕರಾಚಿ, ಆ. ೬: ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಭಾನುವಾರ ಪಾಕಿಸ್ತಾನದಲ್ಲಿ ಕನಿಷ್ಟ ೧೫ ಜನರು ಸಾವಿಗೀಡಾಗಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಹಜಾರಾ ಎಕ್ಸ್ಪ್ರೆಸ್ ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿತ್ತು ಮತ್ತು ನವಾಬ್‌ಶಾ ಪ್ರದೇಶದ ಸರ್ಹಾರಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಹಾನಿಗೊಳಗಾದ ಬೋಗಿಗಳಿಂದ ಕನಿಷ್ಟ ೧೫ ಶವಗಳನ್ನು ಹೊರತೆಗೆಯಲಾಗಿದ್ದು, ಸುಮಾರು ೫೦ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಪಾಕಿಸ್ತಾನ ರೈಲ್ವೆಯ ಉಪ ಅಧೀಕ್ಷಕ ಮಹಮೂದ್ ರೆಹಮಾನ್ ತಿಳಿಸಿದ್ದಾರೆ. ಸರ್ಹಾರಿ ರೈಲು ನಿಲ್ದಾಣದ ಬಳಿ ಅಪಘಾತದ ಸ್ಥಳದಲ್ಲಿ ರೈಲಿನ ಭೋಗಿಗಳು ತೀವ್ರ ಹಾನಿಗೊಳಗಾಗಿರುವುದು ಕಂಡುಬAದಿದೆ. ಸದ್ಯ, ರಕ್ಷಣಾ ಕಾರ್ಯಾಚರಣೆಯ ಮೇಲೆ ಗಮನ ಹರಿಸಲಾಗಿದ್ದು, ಅಪಘಾತದ ಹಿಂದಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ರೆಹಮಾನ್ ಹೇಳಿದರು.

ಕಾಲು ಜಾರಿ ಬಿದ್ದ ಸಾಲು ಮರದ ತಿಮ್ಮಕ್ಕ

ಬೆಂಗಳೂರು, ಆ. ೬: ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಸಂಜೆ ೪.೩೦ರ ಸುಮಾರಿಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ೧೧೨ ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶಾಸಕನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣು

ಚಿತ್ರದುರ್ಗ, ಆ. ೬: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ತಿಪ್ಪೇಸ್ವಾಮಿ ಅವರು ನಿನ್ನೆ ಹೊಸದುರ್ಗ ತಾಲೂಕಿನ ಜಾನಕಲ್ ಬಳಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಎಂ.ಚAದ್ರಪ್ಪ ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಪ್ಪೇಸ್ವಾಮಿ ಅವರು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಈ ಸಂಬAಧ ಮೃತ ತಿಪ್ಪೇಸ್ವಾಮಿ ಪುತ್ರ ರಾಜಶೇಖರಪ್ಪ ಎನ್ನುವರು ಹೊಸದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರಿನಲ್ಲಿ ಶಾಸಕ ಎಂ.ಚAದ್ರಪ್ಪ, ತಾಲೂಕು ಪಂಚಾಯಿತಿ ಇಓ ರವಿ ಹೆಸರು ಉಲ್ಲೇಖವಿಲ್ಲ. ಸ್ವತಃ ತಿಪ್ಪೇಸ್ವಾಮಿಯೇ ನಿರ್ದಿಷ್ಟವಾಗಿ ಶಾಸಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಇದೀಗ ದೂರಿನಲ್ಲಿ ಅವರ ಹೆಸರು ಇಲ್ಲದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಭೀಕರ ಅಪಘಾತದಲ್ಲಿ ಪೊಲೀಸ್ ಪೇದೆ, ಪತ್ನಿ ಸಾವು

ಭಿಂಡ್, ಆ. ೬: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಮೃತ ಪೊಲೀಸ್ ಮಧ್ಯಪ್ರದೇಶ ಪೊಲೀಸರ ವಿಶೇಷ ಸಶಸ್ತç ಪಡೆಯ(ಎಸ್‌ಎಎಫ್) ೧೪ನೇ ಬೆಟಾಲಿಯನ್‌ನಲ್ಲಿದ್ದರು. ಇಂದು ಬೆಳಗ್ಗೆ ಭಿಂಡ್-ಗ್ವಾಲಿಯರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗ್ವಾಲಿಯರ್‌ನಲ್ಲಿರುವ ರಾಜ್ಯ ಪೊಲೀಸ್‌ನ ೧೪ನೇ ಬೆಟಾಲಿಯನ್‌ನಲ್ಲಿ ಹೆಡ್‌ಕಾನ್ಸ್ಟೇಬಲ್ ಆಗಿ ನಿಯೋಜನೆಗೊಂಡಿರುವ ಅನಿರುದ್ಧ್ ಯಾದವ್ ತಮ್ಮ ಕುಟುಂಬದೊAದಿಗೆ ತಮ್ಮ ಸ್ವಂತ ಗ್ರಾಮವಾದ ಸಾಗ್ರಾ(ಉತ್ತರ ಪ್ರದೇಶ)ಗೆ ಕಾರಿನಲ್ಲಿ ಹೋಗುತ್ತಿದ್ದರು. ಮೆಹಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಹಾದ್ ಗ್ರಾಮದ ಬಳಿ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಯಾದವ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅನಿರುದ್ಧ್ ಯಾದವ್ ಮತ್ತು ಅವರ ಪತ್ನಿ ಮೀರಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ೨೦ ವರ್ಷದ ಮಗಳು ಪ್ರೀತಿ ಮತ್ತು ೨೩ ವರ್ಷದ ಮಗ ಅಭಿಷೇಕ್ ಗಾಯಗೊಂಡಿದ್ದಾರೆ.