ಸಿದ್ದಾಪುರ, ಆ. ೭: : ಅಕ್ರಮ ಗಾಂಜಾ ಗಿಡಗಳನ್ನು ಬೆಳೆದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿ ದ್ದಾರೆ.

ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಗೂಡ್ಲೂರು ಚನ್ನಂಗಿ ನಿವಾಸಿ ಕಿರಣ್ (೬೦) ಎಂಬಾತ ತೋಟದಲ್ಲಿ ಗಾಂಜಾಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಸ್ಥಳದಲ್ಲಿದ್ದ ಸುಮಾರು ೩೧ ಕೆ.ಜಿ. ತೂಕದ ೧೮ ಗಾಂಜಾ ಗಿಡಗಳ ಸಹಿತ ಆರೋಪಿ ರಾಮಪ್ಪನನ್ನು ಬಂಧಿಸಿದ್ದಾರೆ. ಎನ್‌ಡಿಪಿಎಸ್ ಕಾಯ್ದೆ ೧೯೮೫ ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಎಸ್‌ಪಿ ರಾಮರಾಜನ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಜಗದೀಶ್, ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್‌ಐ ತಿಮ್ಮಯ್ಯ, ಸಿಬ್ಬಂದಿಗಳಾದ ಸಂತೋಷ್, ಲಕ್ಷಿö್ಮಕಾಂತ್ ಇದ್ದರು.