ಮಡಿಕೇರಿ, ಆ. ೬- ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ತಾ.೮ ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಡಿಕೇರಿ ವ್ಯಾಪ್ತಿಯಲ್ಲಿ ಪೊಲೀಸ್ ಇಲಾ ಖೆಗೆ ಸಂಬAಧಿಸಿದAತೆ ವಿವಿಧ ಕಾನೂನು ಸಮಸ್ಯೆ ಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ರೋಟರಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ತಾ.೮ ರಂದು ಸಂಜೆ ೭ ಗಂಟೆಗೆ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ಸಂವಾದ ನಡೆಸ ಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ಸಹಾಯಕ ಗವರ್ನರ್ ದೇವಣಿರ ತಿಲಕ್ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.